ಮಕ್ಳಳಲ್ಲಿ ದೇಶದ ಸಂಸ್ಕ್ರತಿ ಬೆಳೆಸಲು ಪ್ರತಿಭಾ ಕಾರಂಜಿ ಸಹಕಾರಿ

KannadaprabhaNewsNetwork |  
Published : Dec 15, 2024, 02:00 AM IST
ಪೋಟೊ: 14ಎಸ್‌ಎಂಜಿಕೆಪಿ4ಶಿವಮೊಗ್ಗ ನಗರದ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾಡಳಿತ. ಜಿಲ್ಲಾ ಪಂಚಾಯಿತಿ, ಉಪನಿರ್ದೇಶಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. | Kannada Prabha

ಸಾರಾಂಶ

ಶಿವಮೊಗ್ಗ ನಗರದ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳ ಜೊತೆಗೆ ದೇಶದ ಸಂಸ್ಕ್ರತಿ, ಪರಂಪರೆಯನ್ನು ಬೆಳೆಸಲು, ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ನಗರದ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಉಪನಿರ್ದೇಶಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಕೇವಲ ಪಠ್ಯ ಪ್ರವೃತ್ತಿಯನ್ನು ಬೆಳೆಸುವುದು ಮಾತ್ರವಲ್ಲದೆ ಅವರಲ್ಲಿ ಪ್ರತಿಭೆಯನ್ನು ಹೊರತರಲು ಮತ್ತು ನಮ್ಮ ದೇಶದ ಸಂಸ್ಕ್ರತಿ, ಪರಂಪರೆ, ಪದ್ಧತಿಯ ಯೋಚನೆಯನ್ನು ಇಟ್ಟುಕೊಂಡು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಆಯೊಜಿಸಲಾಗಿದೆ ಎಂದರು.ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಸರ್ಕಾರವು ಮಕ್ಕಳ ನಾನಾ ರೀತಿಯ ಚಟುವಟಿಕೆಗಳು ಮತ್ತು ಕಲೆ ಪ್ರದರ್ಶಿಸಲು ಒಂದು ವೇದಿಕೆ ಸೃಷ್ಟಿಸಿದೆ.‌

ಹಿಂದಿನ ದಿನಗಳಲ್ಲಿ ಪರೀಕ್ಷೆ ಮತ್ತು ಶಿಕ್ಷಣಕ್ಕೆ ಮಾತ್ರ ಹೆಚ್ಚು ಮನ್ನಣೆ ಇತ್ತು ಆದರೆ ಇಂದು ಪಠೇತರ ಚಟುವಟಿಕೆಗಳಿಗೆ ಮಹತ್ವ ನೀಡಿದೆ. ವೈವಿಧ್ಯಮಯ ದೇಶ ನಮ್ಮದು, ಊರಿಂದ ಊರಿಗೆ ಸಂಸ್ಕೃತಿಯು ವಿಭಿನ್ನ ರೀತಿಯಲ್ಲಿ ಇದೆ. ಅದನ್ನು ಉಳಿಸಲು ಮಕ್ಕಳಿಗೆ ಸಂಸ್ಕಾರ ಮತ್ತು ಶಿಷ್ಠಾಚಾರ ನೀಡುವ ಮೂಲಕ ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಉಳಿಸಲು ಸಾದ್ಯ ಎಂದರು.ಉಪನಿರ್ದೇಶಕ ಎಸ್‌.ಆರ್.ಮಂಜುನಾಥ್ ಮಾತನಾಡಿ, ಶಾಲೆಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ಅವರಲ್ಲಿ ಕಲೆ ಹೊರಹಾಕಲು ಈ ರೀತಿಯ ಕಾರ್ಯಕ್ರಮ ಪ್ರಾರಂಭಿಸಿದರು. ಓದುವಿನ ಜೊತೆ ಕ್ರಿಡೆ, ಕಲೆ, ಸಂಸ್ಕೃತಿ ಗುರುತಿಸುವಿಕೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ಶಿಕ್ಷಕರು ಮಕ್ಕಳ ಕಲೆ ಗುರುತಿಸಿ ಪ್ರೊತ್ಸಾಹ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ರಾಷ್ಟ್ರೀಯ ಪದವಿಪೂರ್ವ ಕಾಲೇಜು ಉಪ ಪ್ರಾಂಶುಪಾಲರು, ಶಿಕ್ಷರು, ಸರ್ಕಾರಿ ಮತ್ತು ಸರ್ಕಾರೇತರ ಶಿಕ್ಷಕರು, ಸಿಬ್ಬಂದಿ ಮತ್ತು ಪೋಷಕರು ಭಾಗವಹಿಸಿದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ