ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ

KannadaprabhaNewsNetwork |  
Published : Nov 20, 2026, 02:15 AM IST
ಕಂಪ್ಲಿಯಲ್ಲಿ 8ನೇ ವಾರ್ಡ್ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು. | Kannada Prabha

ಸಾರಾಂಶ

ಕ್ಷಣದ ಜತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಅಭಿನಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು.

ಕಂಪ್ಲಿ: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆ ಗುರುತಿಸಿ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ ಬೆಳೆಸಿಕೊಳ್ಳಬೇಕು ಎಂದು ಕಲ್ಯಾಣ ಚೌಕಿಮಠ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ.ಎಂ. ಚನ್ನಮಲ್ಲಯ್ಯ ಶಾಸ್ತ್ರಿ ಹೇಳಿದರು.

ಪಟ್ಟಣದ ಸ್ಥಳೀಯ ಶಂಬುಲಿಂಗೇಶ್ವರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ 8ನೇ ವಾರ್ಡ್ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳ ಪ್ರತಿಭೆ ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗಿರಬಾರದು. ಶಿಕ್ಷಣದ ಜತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಅಭಿನಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಇಂತಹ ಸ್ಪರ್ಧೆ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುವುದರ ಜತೆಗೆ ವೇದಿಕೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸುತ್ತವೆ. ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆ, ಕಲಾತ್ಮಕ ಅಭಿರುಚಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದರು.

ಸಿಆರ್‌ಪಿ ಗಂಗಾಧರ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಮಹತ್ವ ನೀಡಬೇಕು. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ನಾಯಕತ್ವ ಗುಣ, ಶಿಸ್ತು, ಆತ್ಮವಿಶ್ವಾಸ ಮತ್ತು ಸೃಜನಶೀಲತೆ ಬೆಳೆಯುತ್ತದೆ. ಶಿಕ್ಷಣದ ಉದ್ದೇಶ ಕೇವಲ ಅಂಕ ಗಳಿಸುವುದಲ್ಲ, ವಿದ್ಯಾರ್ಥಿಗಳು ಜೀವನದ ಎಲ್ಲ ಕ್ಷೇತ್ರಗಳಲ್ಲಿಯೂ ಸಮರ್ಥವಾಗಿ ಮುನ್ನಡೆಯುವಂತೆ ಸರ್ವಾಂಗೀಣ ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಡು, ನೃತ್ಯ, ಭಾಷಣ, ಅಭಿನಯ ಸೇರಿದಂತೆ ಹಲವು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. 8ನೇ ವಾರ್ಡ್ ಕ್ಲಸ್ಟರ್ ವ್ಯಾಪ್ತಿಯ 31 ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಕಾರ್ಯಕ್ರಮ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಯಿತು.

ಕಲ್ಯಾಣ ಚೌಕಿಮಠದ ಕೆ.ಎಂ. ಬಸವರಾಜ ಶಾಸ್ತ್ರಿ, ಉಪಪ್ರಾಚಾರ್ಯೆ ಸುಜಾತಾ, ಇಸಿಒ ರೇವಣ್ಣ, ಶಿಕ್ಷಕರಾದ ಕೆ.ಹನುಮಂತಪ್ಪ, ಎಚ್. ದೊಡ್ಡಬಸಪ್ಪ, ಎಂ.ಎ.ನಾಗನಗೌಡ, ಟಿ.ಎಂ. ಬಸವರಾಜ, ಮಂಜುನಾಥ, ಜೋಗಿ ನಾಯ್ಕ ರುದ್ರಪ್ಪ, ಜಡಿಯಪ್ಪ, ಕಲೀಲ್, ವೆಂಕೋಬಪ್ಪ, ಸಿ.ರಮೇಶ, ಸಿ.ರಾಮಚಂದ್ರಪ್ಪ, ರಾಜು ಬೆಳಂಕರ್, ನಿವೃತ್ತ ಶಿಕ್ಷಕ ಬಸವರಾಜ, ಸಿಆರ್‌ಪಿಗಳಾದ ರೇಣುಕಾರಾಧ್ಯ, ಭೂಮೇಶ್ವರ, ಪ್ರಭಾಕರ, ಕರುಣಾಕರ ಆಚಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ ವಿಟಿಯುನಲ್ಲಿ ಕನ್ನಡ ಹಬ್ಬ -26 ಸಂಭ್ರಮ
ಗೃಹಲಕ್ಷ್ಮಿ ಹಣದಾಸೆಗೆ ಅಜ್ಜಿ ಕೊಂದ ಮೊಮ್ಮಗ