ದಾಬಸ್‍ಪೇಟೆ:
ಸೋಂಪುರ ಹೋಬಳಿಯ ನರಸೀಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನರಸೀಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಹೊರಹೊಮ್ಮಲು ಪ್ರತಿಭಾ ಕಾರಂಜಿ ಪೂರಕವಾಗಿದೆ. ಮಕ್ಕಳು ಓದಿನ ಜತೆಗೆ ಇಂತಹ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಇಲ್ಲಿ ವಿಜೇತರಾದ ಮಕ್ಕಳು ರಾಜ್ಯ ಮಟ್ಟದವರೆಗೂ ಹೋಗಬೇಕು ಎಂದು ಆಶಿಸಿದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನಾಗೇಶ್ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಬೇಕು. ಮಕ್ಕಳ ಸಮಗ್ರ ಬೆಳವಣಿಗೆಗೆ ಸಮುದಾಯದ ಪೆÇೀಷಕರು ಚಾಚು ತಪ್ಪದೇ ಭಾಗವಹಿಸಬೇಕು. ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತಂದಾಗ ಮಾತ್ರ ಪ್ರತಿಭಾ ಕಾರಂಜಿ ಧ್ಯೇಯೋದ್ದೇಶಗಳು ಸಾರ್ಥಕವಾಗುತ್ತವೆ ಎಂದು ಹೇಳಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಅಧ್ಯಕ್ಷ ಪುಟ್ಟರುದ್ರಾರಾಧ್ಯ ಮಾತನಾಡಿ, ಮಕ್ಕಳ ಮನಸ್ಸಿನಲ್ಲಿ ಅಡಗಿರುವ ಪ್ರತಿಭೆ ಹೊರ ಹಾಕಲು ಸರ್ಕಾರ ರೂಪಿಸಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಿಂದ ಗ್ರಾಮೀಣ ಕಲೆಗಳ ಮೂಲಕ ಪ್ರತಿಭೆ ಹೊರ ಸೂಸಲು ಉತ್ತಮ ವೇದಿಕೆಯಾಗಿದೆ. ಆಟ ಮತ್ತು ಮತ್ತಿತರೆ ಕ್ಷೇತ್ರಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಪ್ರೋತ್ಸಾಹಿಸುವ ಮೂಲಕ ಕಲೆ, ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೂ ಉತ್ತೇಜನ ನೀಡಬೇಕು ಎಂದರು.
ಪೋಟೋ 7 :