ಪ್ರತಿಭೆಗಳ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

KannadaprabhaNewsNetwork |  
Published : Nov 23, 2026, 01:15 AM IST
ತಾಲೂಕಿನ ರಾಮೇಶ್ವರ ಗ್ರಾಮದ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪೂವರ್ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುರಹೊನ್ನೆ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭೆಯನ್ನು ಅನಾವರಣ ಮಾಡಿದರು. | Kannada Prabha

ಸಾರಾಂಶ

ನ್ಯಾಮತಿ: ಕಲಿಕೆಯ ಜೊತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ, ಕಲಾಭಿರುಚಿಯನ್ನು ಬೆಳೆಸುವ ಉದ್ದೇಶ ಪ್ರತಿಭಾ ಕಾರಂಜಿ ಕಾರ್ಯಕ್ರಮದ್ದಾಗಿದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಲು ಶಿಕ್ಷಕರು, ಪೋಷಕರಿಗೆ ಅವಕಾಶ ಒದಗಿಸುವ ವೇದಿಕೆಯಾಗಿದೆ ಎಂದು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾಗರಾಜ್‌ ತಿಳಿಸಿದರು.

- ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನಾಗರಾಜ್‌ ಅಭಿಮತ

- - -

ನ್ಯಾಮತಿ: ಕಲಿಕೆಯ ಜೊತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ, ಕಲಾಭಿರುಚಿಯನ್ನು ಬೆಳೆಸುವ ಉದ್ದೇಶ ಪ್ರತಿಭಾ ಕಾರಂಜಿ ಕಾರ್ಯಕ್ರಮದ್ದಾಗಿದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಲು ಶಿಕ್ಷಕರು, ಪೋಷಕರಿಗೆ ಅವಕಾಶ ಒದಗಿಸುವ ವೇದಿಕೆಯಾಗಿದೆ ಎಂದು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾಗರಾಜ್‌ ತಿಳಿಸಿದರು.

ತಾಲೂಕಿನ ರಾಮೇಶ್ವರ ಗ್ರಾಮದ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುರಹೊನ್ನೆ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಲ್ಲಿನ ಪ್ರತಿಭೆ ಹೆಸರೇ ಸೂಚಿಸುವಂತೆ ಕಾರಂಜಿಯಂತೆ ಚಿಮ್ಮಬೇಕು. ಮಕ್ಕಳ ಪ್ರತಿಭೆಗೆ ಎಲ್ಲರೂ ಪ್ರೋತ್ಸಾಹ, ಪ್ರೇರಣೆ ನೀಡಬೇಕು. ಆಸ್ತಿ, ಆಭರಣ ಎಂದೂ ಶಾಶ್ವತವಲ್ಲ, ಶಿಕ್ಷಣ ಮಾತ್ರ ಎಂದಿಗೂ ಪ್ರಜ್ವಲಿಸುತ್ತದೆ. ಬಡ ಮಕ್ಕಳಿಗೂ ದ್ವಿಭಾಷೆಯಲ್ಲಿ ಶಿಕ್ಷಣ ದೊರೆಯಬೇಕು, ಶಿಕ್ಷಣ ಎಂದರೆ ಕೇವಲ ಓದು ಬರಹ ಅಲ್ಲ. ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತಂದು ಅವರ ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡಿಕೊಡಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಮೇಶ್ವರ, ಯರಗನಾಳ್‌, ಕುದರೆಕೊಂಡ, ಸುರಹೊನ್ನೆ, ಸೋಗಿಲು, ಚಟ್ನಹಳ್ಳಿ, ಫಲವನಹಳ್ಳಿ, ಬಸವನ ಬಡಾವಣೆ, ಮುಸ್ಸೆನಾಳ್‌ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲ ಮಕ್ಕಳು, ಖಾಸಗಿ ಅನುದಾನಿತ ಶಾಲೆಗಳಾದ ಶಾಂಭವಿ, ಮದರ್‌ ಮೇರಿ, ಲಕ್ಷ್ಮೀ ನಾರಾಯಣ ವಿದ್ಯಾ ಸಂಸ್ಥೆ ಶಾಲಾ ಮಕ್ಕಳು ಕನ್ನಡ, ಇಂಗ್ಲಿಷ್‌, ಹಿಂದಿ ಕಂಠಪಾಠ, ಧಾರ್ಮಿಕ ಪಠಣ, ಭಕ್ತಿಗೀತೆ, ದೇಶ ಭಕ್ತಿಗೀತೆ, ಛಧ್ಮವೇಷ, ಆಶುಭಾಷಣ, ಕ್ಲೈಮಾಡ್ಲೀಂಗ್‌ ಇತರೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳ ಪ್ರಶಸ್ತಿ ಪತ್ರ, ಪದಕಗಳನ್ನು ಗಳಿಸಿಕೊಂಡರು.

- - -

-ಚಿತ್ರ:

ಸುರಹೊನ್ನೆ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭೆಗಳ ಮೆರೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ಷರದೊಳಗಿನ ಅರಿವು ಪ್ರಜ್ಞೆಯ ಭಾಗವಾಗಬೇಕು: ಡಾ.ಕಾ.ವೆಂ.ಶ್ರೀನಿವಾಸಮೂರ್ತಿ
ಕೃಷಿ ಕ್ಷೇತ್ರ ಬಿಕ್ಕಟ್ಟಿಗೆ ಪರಿಣಾಮಕಾರಿ ಪರಿಹಾರ ಅಗತ್ಯ: ಡಾ.ಎಂ.ವಿ.ಧನಂಜಯ