ಮಕ್ಕಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ: ಮರಯ್ಯ

KannadaprabhaNewsNetwork |  
Published : Nov 20, 2026, 01:45 AM IST
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲಿಕೋತ್ಸವ ಕಾರ್ಯಕ್ರಮ ಚಾಲನೆ | Kannada Prabha

ಸಾರಾಂಶ

ಮಕ್ಕಳು ಶಾಲೆಗೆ ಬಂದಾಗ ಅವರ ಪ್ರತಿಭೆಗಳನ್ನು ಗುರುತಿಸುವವರೇ ಶಿಕ್ಷಕರು. ಆ ಹಿನ್ನಲೆಯಲ್ಲಿ ಬಾಲ್ಯದಲ್ಲಿ ನೃತ್ಯ, ಸಂಗೀತ, ಚಿತ್ರಕಲೆ ಮುಂತಾದ ಕಲೆಗಳನ್ನು ಕಲಿತುಕೊಂಡು ಜೀವನದಲ್ಲಿ ಉಜ್ವಲ ಭವಿಷ್ಯ ನಿರ್ಮಾಣ ಮಾಡಬಹುದು.

ಕನ್ನಡಪ್ರಭ ವಾರ್ತೆ ಯಳಂದೂರು

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಸೂಕ್ತ ವೇದಿಕೆ ಕಲ್ಪಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮೂಲ ಉದ್ದೇಶ ಎಂದು ಕ್ಞೇತ್ರ ಶಿಕ್ಷಣಾಧಿಕಾರಿ ಮರಯ್ಯ ತಿಳಿಸಿದರು.

ತಾಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ 2ನೇ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೆಸ್ತೂರು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮದಿಂದ ಮಕ್ಕಳ ಪ್ರತಿಭೆಗಳ ಅನಾವರಣ ಸಾಧ್ಯ. ವ್ಯಕ್ತಿಯ ಜೀವನದಲ್ಲಿ ಬಾಲ್ಯಾವಸ್ಥೆ ಅತ್ಯುತ್ತಮ ಕ್ಷಣವಾಗಿದೆ. ಮಕ್ಕಳು ಶಾಲೆಗೆ ಬಂದಾಗ ಅವರ ಪ್ರತಿಭೆಗಳನ್ನು ಗುರುತಿಸುವವರೇ ಶಿಕ್ಷಕರು. ಆ ಹಿನ್ನಲೆಯಲ್ಲಿ ಬಾಲ್ಯದಲ್ಲಿ ನೃತ್ಯ, ಸಂಗೀತ, ಚಿತ್ರಕಲೆ ಮುಂತಾದ ಕಲೆಗಳನ್ನು ಕಲಿತುಕೊಂಡು ಜೀವನದಲ್ಲಿ ಉಜ್ವಲ ಭವಿಷ್ಯ ನಿರ್ಮಾಣ ಮಾಡಬಹುದು. ಶಿಕ್ಷಕರು ಮಕ್ಕಳಿಗೆ ಅಡಕವಾಗಿರುವ ಕಲೆಗಳನ್ನು ಪ್ರೋತ್ಸಾಹಿಸಬೇಕು ಕರೆ ನೀಡಿದರು.ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಮ್ಮನಪುರ ಮಹೇಶ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಪ್ರಧಾನ ಕಾರ್ಯದರ್ಶಿ ಹೊನ್ನೂರು ಸೋಮಣ್ಣ, ರಾಜೇಶ್, ಎಸ್‌ಡಿಎಂಸಿ ಅಧ್ಯಕ್ಷ ಶಾಂತರಾಜು, ಉಪಾಧ್ಯಕ್ಷೆ ಸಂಗೀತ, ಕೆಸ್ತೂರು ಸರ್ಕಾರಿ ಶಾಲೆ -2ರ ಮುಖ್ಯಶಿಕ್ಷಕಿ ಎಂ. ಲೀಲಾ, ಶಿಕ್ಷಕರಾದ ಗಾಯಿತ್ರಿ, ನಂಜಯ್ಯ, ಜಯಶ್ರೀ, ಮಾಲಾವತಿ, ವಿವಿಧ ಕ್ಲಸ್ಟರ್‌ ಸಿಆರ್‌ಪಿಗಳು ಹಾಗೂ ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನ ನೆಚ್ಚದೇ ಊರ ಕೆರೆ ಸ್ಚಚ್ಛ ಮಾಡಿಕೊಂಡ ಗ್ರಾಮಸ್ಥರು
ಪಂಚತಂತ್ರ ಕಥೆಗಳ ಮೌಲ್ಯ ಮಕ್ಕಳ ಮನಃಪರಿವರ್ತನೆಗೆ ಸಹಕಾರಿ: ವಿವೇಕಾನಂದಗೌಡ ಪಾಟೀಲ