ಕನ್ನಡಪ್ರಭ ವಾರ್ತೆ ಯಲಬುರ್ಗಾ
ಪಟ್ಟಣದ ಹೇಮಾದ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ನಡೆದ ಯಲಬುರ್ಗಾ-ಕುಕನೂರು ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಮಕ್ಕಳಲ್ಲಿ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅಂತಹ ಪ್ರತಿಭೆ ಹೊರತರಲು ಇಂತಹ ಕಾರ್ಯಕ್ರಮಗಳು ಮಕ್ಕಳ ಪಾಲಿಗೆ ವರದಾನವಾಗಿವೆ ಎಂದರು.
ಎಲ್ಲ ಶಾಲೆಗಳ ಮಕ್ಕಳು ನಮ್ಮ ಮಕ್ಕಳೇ ಎನ್ನುವ ಮನೋಭಾವದಿಂದ ಅವರ ಕಲೆಗೆ ಧಕ್ಕೆಯಾಗದಂತೆ ತೀರ್ಪುಗಾರರು ನಿರ್ಣಯ ನೀಡಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಸರ್ಕಾರ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮ ಜಾರಿಗೆ ತಂದಿರುವುದು ಮಕ್ಕಳ ಪಾಲಿಗೆ ಆಶಾಕಿರಣವಾಗಿದೆ ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ ಮಾತನಾಡಿ, ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಯನ್ನು ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಅವರಲ್ಲಿ ಇರುವ ಪ್ರತಿಭೆಯನ್ನು ಗುರುತಿಸುವ ನಿರ್ಣಾಯಕರು ಉತ್ತಮ ಪ್ರತಿಭೆಗೆ ಪ್ರೋತ್ಸಾಹ ನೀಡಿದಾಗ ಸಮಾಜದಲ್ಲಿ ಅವರ ಪ್ರತಿಭೆ ಬೆಳೆಯಲು ಸಾಧ್ಯ ಎಂದರು.
ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಈಶ್ವರಯ್ಯ ಹಲಸಿನಮಠ ಪ್ರಾರ್ಥಿಸಿದರು.