ಪ್ರತಿಭಾ ಕಾರಂಜಿ ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಸೋಮಯ್ಯ

KannadaprabhaNewsNetwork |  
Published : Dec 05, 2025, 02:30 AM IST
ನೃತ್ಯ  | Kannada Prabha

ಸಾರಾಂಶ

ಪ್ರತಿಭಾ ಕಾರಂಜಿ ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸಹಾಯ ಮಾಡುವ ಬೃಹತ್‌ ಕಲಿಕೆಯ ಹಬ್ಬವಾಗಿದೆ ಎಂದು ಸೋಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಪ್ರತಿಭಾ ಕಾರಂಜಿ ಕೇವಲ ಸ್ಪರ್ಧೆಯಲ್ಲ, ಬದಲಿಗೆ ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸಹಾಯ ಮಾಡುವ ಒಂದು ಬೃಹತ್ ಕಲಿಕೆಯ ಹಬ್ಬವಾಗಿದೆ ಎಂದು ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಯ್ಯ ತಿಳಿಸಿದರು.

7ನೇ ಹೊಸಕೋಟೆಯ ದೀಪ್ತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು ಪ್ರತಿಭಾ ಕಾರಂಜಿ ಎನ್ನುವುದು ಶಾಲಾ ಮಟ್ಟದಲ್ಲಿ ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಹೊರತರಲು ಇರುವ ಒಂದು ಅತ್ಯುತ್ತಮ ವೇದಿಕೆಯಾಗಿದೆ. ಕೇವಲ ಶೈಕ್ಷಣಿಕವಲ್ಲದೆ, ಚಿತ್ರಕಲೆ, ಹಾಡು, ನೃತ್ಯ, ನಾಟಕ, ಕಥೆ ಹೇಳುವುದು, ಭಾಷಣ, ಜಾನಪದ ಕಲೆ, ವಿಜ್ಞಾನ ಮಾದರಿಗಳ ಪ್ರದರ್ಶನ ಮುಂತಾದ ಅನೇಕ ಸ್ಪರ್ಧೆಗಳಿಗೆ ಅವಕಾಶ ನೀಡುತ್ತದೆ. ಇದರಿಂದ ಮಕ್ಕಳಿಗೆ ಆತ್ಮಸ್ಥೈರ್ಯ ಹೆಚ್ಚಾಗಿ, ಉತ್ತಮ ವ್ಯಕ್ತಿಯಾಗಿ ಬೆಳೆಯಲು ಸಹಾಯವಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಛದ್ಮವೇಷ ಅಭಿನಯ ಗೀತೆ, ಜಾನಪದ ನೃತ್ಯ, ದೇಶಭಕ್ತಿ ಗೀತೆ, ಭಾಷಣ ಚಿತ್ರಕಲೆ ಇನ್ನಿತರ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ ನಡೆಯಿತು.ಸಮಾರಂಭದ ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜೋಸೆಫ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ನಂದೀಶ್, ಶಾಲೆಯ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ಜಿಜಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾದ ಸೀಮಾ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಯವರಾದ ಬಿ.ಎನ್‌. ಸೌಭಾಗ್ಯ, ಸರ್ಕಾರಿ ಪ್ರೌಢಶಾಲಾ 7ನೇ ಹೊಸಕೋಟೆ ಮುಖ್ಯ ಶಿಕ್ಷಕರಾದ ಸೋಮಯ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿಯವರಾದ ಶೈಲಾ , ಮಾದಾಪುರ ಕ್ಲಸ್ಟರ್‌ನ ಸಿ ಆರ್ ಪಿ ಟಿ. ಈ. ಮಂಜುನಾಥ್, ಶಿಕ್ಷಕರಾದ ಎ.ಎಂ.ಭರತ್, ಬಿಪಿನ್, ಎಸ್.ಆರ್.ಶಿವಲಿಂಗ ಇತರರು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ವಿವಿಧ ಸ್ಪರ್ಧೆ

ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯ ದೀಪ್ತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುಂಟಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶಾಲಾ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಪ್ರೇಕ್ಷಕರ ಗಮನ ಸೆಳೆದರು.ವಿದ್ಯಾರ್ಥಿಗಳು ಛದ್ಮವೇಷ ಸ್ಪರ್ಧೆ, ರಂಗೋಲಿ, ಚಿತ್ರಕಲೆ, ಅಭಿನಯ, ಕವನ ವಾಚನ, ಕವ್ವಾಲಿ, ಗಝಲ್, ಧಾರ್ಮಿಕ ಪಠಣ, ಜಾನಪದ ಗೀತೆ, ಆಶುಭಾಷಣ, ಪ್ರಬಂಧ, ಭಾಷಣ, ಚರ್ಚಾಸ್ಪರ್ಧೆ ಮತ್ತು ರಸಪ್ರಶ್ನೆ, ಜಾನಪದ ನೃತ್ಯ ಹಾಗೂ ಭರತ ನಾಟ್ಯ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದರು.ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಮಕ್ಕಳು ಮಣ್ಣಿನಿಂದ ವಿವಿಧ ಕಲಾಕೃತಿಗಳನ್ನು ರಚಿಸಿ ಗಮನ ಸೆಳೆದರು.ಗಮನ ಸೆಳೆದ ಮಕ್ಕಳ ಛದ್ಮವೇಷ:

ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಮಂಗಳವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವಿಧ ವೇಷಭೂಷಣ ಧರಿಸಿದ್ದ ಮಕ್ಕಳು ಗಮನ ಸೆಳೆದರು. ಸಿಆರ್ಪಿ ಸೀಮಾ ಮತ್ತು ಶಿಕ್ಷಕಿಯರು ಇದ್ದರು.

ಗಮನ ಸೆಳೆದ ನೃತ್ಯ: ಪ್ರದರ್ಶನ ಸುಂಟಿಕೊಪ್ಪ ಹೋಬಳಿಯ ಏಳನೇ ಹೊಸಕೋಟೆ ದೀಪ್ತಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಸುಂಟಿಕೊಪ್ಪ ಕ್ಲಸ್ಟರ್ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಕ್ಕಳ ಸಾಮೂಹಿಕ ನೃತ್ಯ ಪ್ರದರ್ಶನ ಗಮನ ಸೆಳೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳ್ತಂಗಡಿ ಬಸ್ ನಿಲ್ದಾಣ ಕಾಮಗಾರಿಗೆ ಮರುಜೀವ
ವೀರಾಂಜನೇಯ ಸೇವಾ ಸಮಿತಿ ಪ್ರಥಮ