ಹಗರಿಬೊಮ್ಮನಹಳ್ಳಿ: ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಪ್ರತಿ ಮಗುವಿನಲ್ಲೂ ಒಬ್ಬ ಕಲಾವಿದನಿದ್ದಾನೆ. ಮಕ್ಕಳ ಕಲಾತ್ಮಕ ಚಟುವಟಿಕೆ ಗುರುತಿಸಿ ಸಮಾಜ ಮತ್ತು ಜನತೆಗೆ ಪರಿಚಯಿಸುವುದು ಶಿಕ್ಷಕರ ಕರ್ತವ್ಯವಾಗಿದೆ. ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ನೇಮಿರಾಜ್ ನಾಯ್ಕ ಅಭಿಪ್ರಾಯಪಟ್ಟರು.
ಶಿಕ್ಷಣ ಕೇವಲ ಪಠ್ಯ ಪುಸ್ತಕಗಳ ಅಧ್ಯಯನಕ್ಕೆ ಮಾತ್ರ ಸೀಮಿತವಾಗಬಾರದು. ಈ ನಿಟ್ಟಿನಲ್ಲಿ ಮಕ್ಕಳಲ್ಲಿರುವ ಕಲೆ,ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಅಭಿರುಚಿ ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಸ್ಪರ್ಧಾತ್ಮಕ ಅವಕಾಶ ಸರ್ಕಾರ ಕಲ್ಪಿಸಿದೆ. ಇಂತಹ ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ವೇದಿಕೆಯ ಭಯ ತೊಲಗುವುದಲ್ಲದೇ ಸೃಜನಶೀಲತೆ, ಆತ್ಮ ವಿಶ್ವಾಸ ಹಾಗೂ ಸ್ಪರ್ಧಾ ಮನೋಭವ ಹೆಚ್ಚಾಗುತ್ತದೆ ಎಂದು ಪ್ರತಿಪಾದಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಜಗದೀಶ್, ವಿದ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ನಿಮ್ಮ ಕಲಾತ್ಮಕ ವ್ಯಕ್ತಿತ್ವ ಪರಿಚಯಿಸಲು ಮುಂದಾಗಬೇಕು. ವಿದ್ಯಾರ್ಥಿಗಳು ಪಾಲ್ಗೊಳ್ಳುವ ಮೂಲಕ ಸರ್ವತೋಮುಖ ಬೆಳವಣಿಗೆಗೆ ವಿದ್ಯಾರ್ಥಿ ದೆಸೆಯಿಂದಲೇ ನಾಂದಿ ಹಾಡಬೇಕು ಎಂದು ತಿಳಿಸಿದರು.ನಂದೀಪುರ ಡಾ. ಮಹೇಶ್ವರ ಶ್ರೀಗಳು ಮತ್ತು ಪಟ್ಟಣದ ಹಾಲಸಿದ್ಧೇಶ್ವರ ಶ್ರೀಗಳು ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಪೂಜಾ, ಮುಖ್ಯ ಗುರು ಚಂದ್ರಪ್ಪ ಮತ್ತು ಶಿಕ್ಷಕ ರುದ್ರಪ್ಪ ನಿರ್ವಹಿಸಿದರು.