ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಅಂಗವಾಗಿ ರಾಮನಗರ ಕ್ಷೇತ್ರದ ಮುಖಂಡರು ನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಅಭಿಷೇಕ, ಅರ್ಚನೆ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು, ರಾಜ್ಯದಲ್ಲಿ ಅಷ್ಟೆ ಅಲ್ಲ ಎಲ್ಲಾದರು ಕಾಂಗ್ರೆಸ್ ಪಕ್ಷ ಸಂಕಷ್ಟ ಸಮಯದಲ್ಲಿದ್ದರೆ ಡಿ.ಕೆ.ಶಿವಕುಮಾರ್ ಅವರು ಪಕ್ಷಕ್ಕೆ ಹೆಗಲು ಕೊಡುವ ದಕ್ಷ ನಾಯಕರಾಗಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹಗಲಿರುಳು ಶ್ರಮಿಸುತ್ತಾ, ಎಲ್ಲರ ಸಹಕಾರದಲ್ಲಿ ರಾಜ್ಯಾದ್ಯಂತ ಸದೃಢವಾಗಿ ಪಕ್ಷವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
ಡಿ.ಕೆ.ಶಿವಕುಮಾರ್ ನಿಷ್ಠಾವಂತ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ಗೌರವ ಕೊಡುವ ಜವಾಬ್ದಾರಿ ಸಹ ಪಕ್ಷದ ವರಿಷ್ಠರ ಮೇಲಿದೆ. ಹಾಗಾಗಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕೆಂಬುದು, ನಮ್ಮ ಮತ್ತು ಪಕ್ಷದ ಕಾರ್ಯಕರ್ತರ ಆಶಯವಾಗಿದೆ. ಅವರಿಗೆ ಮತ್ತಷ್ಟು ಶಕ್ತಿಯನ್ನು ಚಾಮುಂಡೇಶ್ವರಿ ತುಂಬಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಮಾತನಾಡಿ, ನಮ್ಮ ಜಿಲ್ಲೆಯ ಹೆಮ್ಮೆಯ ಸುಪುತ್ರ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಿ ಎಲ್ಲ ಮುಖಂಡರು ಪ್ರಾರ್ಥನೆ ಸಲ್ಲಿಸಿದ್ದೇವೆ. ಕಳೆದ 40 ವರ್ಷಗಳಿಂದ ಸತತವಾಗಿ ವಿಧಾನಸೌಧ ಪ್ರವೇಶಿಸಿರುವ ಡಿ.ಕೆ.ಶಿವಕುಮಾರ್ ವಿವಿಧ ಇಲಾಖಾ ಮಂತ್ರಿಗಳಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸಂಘಟನೆ ಜೊತೆಗೆ ಉಪಮುಖ್ಯಮಂತ್ರಿಗಳಾಗಿ ಮಾದರಿಯಾಗಬಲ್ಲ ಜನಪರ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿದರು.
ಈ ವೇಳೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಎಚ್.ರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿಎನ್ ಆರ್ ವೆಂಕಟೇಶ್, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗುರುಪ್ರಸಾದ್, ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ, ಸದಸ್ಯರಾದ ಬೈರೇಗೌಡ, ನಾಗಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ ಭೂಷಣ್, ಮುಖಂಡರಾದ ಬಾಬು, ಜಯಣ್ಣ, ಪಾರ್ಥಣ್ಣ, ಪುಟ್ಟರಾಜು, ರೈಡ್ ನಾಗರಾಜು, ಅನಿತಾಅರವಿಂದ್, ಪುಟ್ಟಣ್ಣ, ನರಸಿಂಹಯ್ಯ, ನವೀನ್, ಚೇತನ್, ಪ್ರಾಣೇಶ್, ರಘು, ದೇವರಾಜು, ಚಿಕ್ಕೇಗೌಡ, ಪ್ರಸನ್ನ, ಶಿವಲಿಂಗಯ್ಯ, ವಸಂತ, ಹೇಮಂತ್, ಶೋಭಾ ಸೇರಿದಂತೆ ನೂರಾರು ಮುಖಂಡರು ಪೂಜೆಯಲ್ಲಿ ಭಾಗವಹಿಸಿದ್ದರು.
ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಅಲ್ಲ, ಇಂದಿನಿಂದಲೇ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್ ಅವರ ದುಡಿಮೆಯನ್ನು ಪರಿಗಣಿಸಿ ಮುಖ್ಯಮಂತ್ರಿಯಾಗಲು ಅವಕಾಶ ಕಲ್ಪಿಸಬೇಕು.
ಕೋಟ್ ........
-ಗುರುಪ್ರಸಾದ್, ಮಾಜಿ ಜಿಲ್ಲಾಧ್ಯಕ್ಷರು, ಯುವ ಕಾಂಗ್ರೆಸ್, ಬೆಂ.ದಕ್ಷಿಣ ಜಿಲ್ಲೆ
ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.