ಎಲ್ಲರಿಗೂ ಒಳಿತಾಗಲಿ ರಾಜ್ಯಕ್ಕೆ ಒಳ್ಳೆಯದಾಗಲಿ ಪ್ರಾರ್ಥನೆ: ಡಿಸಿಎಂ

KannadaprabhaNewsNetwork |  
Published : Dec 29, 2025, 01:30 AM IST
ಮಾಗಡಿ ಪಟ್ಟಣದ ಕೋಟೆ ಮೈದಾನದಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಂಪತಿಗಳು ಭಾಗವಹಿಸಿರುವುದು. | Kannada Prabha

ಸಾರಾಂಶ

ಮಾಗಡಿ: ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕ ಕಲ್ಯಾಣವಾಗಲಿ ನಿಮಗೂ(ಮಾಧ್ಯಮ) ಒಳ್ಳೆಯದಾಗಲಿ ಎಂದು‌ ಶ್ರೀನಿವಾಸನಲ್ಲಿ ಪ್ರಾರ್ಥಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಮಾಗಡಿ: ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕ ಕಲ್ಯಾಣವಾಗಲಿ ನಿಮಗೂ(ಮಾಧ್ಯಮ) ಒಳ್ಳೆಯದಾಗಲಿ ಎಂದು‌ ಶ್ರೀನಿವಾಸನಲ್ಲಿ ಪ್ರಾರ್ಥಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಪಟ್ಟಣದ ಕೋಟೆ ಮೈದಾನದಲ್ಲಿ ಕೆಂಪೇಗೌಡ ಉತ್ಸವದ ಅಂಗವಾಗಿ ಶನಿವಾರ ರಾತ್ರಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇವರಲ್ಲಿ ಏನು ಪ್ರಾರ್ಥನೆ ‌ಮಾಡಿದ್ದೀರಿ ಎಂದು ಕೇಳಿದಾಗ, ಭಕ್ತ ‌ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ ದೇವಸ್ಥಾನ. ಏನೇ ಕೇಳಿಕೊಂಡರು ಅದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಶ್ರೀನಿವಾಸ, ಪದ್ಮಾವತಿ, ಲಕ್ಷ್ಮಿ ಪ್ರತಿಯೊಬ್ಬರ ಮನೆ ತುಂಬಲಿ ಎಂದು ಪ್ರಾರ್ಥಿಸುತ್ತೇನೆ. ಮಾಗಡಿ ಜನತೆಗೆ ನೆಮ್ಮದಿ, ಸುಖ, ಶಾಂತಿ ದೊರೆಯಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದರು.

ಸಹೋದ್ಯೋಗಿ ಬಾಲಕೃಷ್ಣ, ಅವರ ಧರ್ಮಪತ್ನಿ ಹಾಗೂ ಕುಟುಂಬ ವರ್ಗ ಕಲ್ಯಾಣೋತ್ಸವ ನೆರವೇರಿಸಿದ್ದಾರೆ. ಇವರ ಮೇಲೂ ದೇವರ ಕೃಪೆ ಸದಾ ಇರುತ್ತದೆ. ಇಲ್ಲಿ ಶ್ರೀನಿವಾಸನ ದರ್ಶನ ಮಾಡುವ ಭಾಗ್ಯ ನನಗೆ ಹಾಗೂ ನನ್ನ ಕುಟುಂಬಕ್ಕೆ ದೊರಕಿದೆ. ಎಲ್ಲರಿಗೂ ಒಳಿತಾಗಲಿ ಎಂದು ಡಿ.ಕೆ.ಶಿವಕುಮಾರ್ ಹಾರೈಸಿದರು.

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಉಷಾಡಿ.ಕೆ.ಶಿವಕುಮಾರ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಶಾಸಕ ಬಾಲಕೃಷ್ಣ, ರಾಧಾ ಬಾಲಕೃಷ್ಣ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಶೋಕ್, ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜ್, ಪೂಜಾರಿಪಾಳ್ಯ ಕೃಷ್ಣಮೂರ್ತಿ, ಜೆ.ಪಿ.ಚಂದ್ರೇಗೌಡ, ಹುಲಿಕಟ್ಟೆ ಭರತ್ ಇತರರು ಭಾಗವಹಿಸಿದ್ದರು.

(ಫೋಟೋ ಕ್ಯಾಫ್ಷನ್‌)

ಮಾಗಡಿ ಪಟ್ಟಣದ ಕೋಟೆ ಮೈದಾನದಲ್ಲಿ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಂಪತಿ ಪಾಲ್ಗೊಂಡಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತ್ಯಾಗ, ಬಲಿದಾನ, ಆದರ್ಶಗಳ ಮೇಲೆ ಹುಟ್ಟಿದ ಕಾಂಗ್ರೆಸ್: ಎಸ್.ಆರ್. ಪಾಟೀಲ
ರೈತ ಸೃಷ್ಟಿಯ ಮೊದಲ ವಿಜ್ಞಾನಿ, ಜಮೀನು ಪ್ರಯೋಗಾಲಯ: ಮಾಜಿ ಸಚಿವ ನಿರಾಣಿ