ಪಿಆರ್‌ಸಿ ರಾಷ್ಟ್ರೀಯ ಭದ್ರತೆಗೆ ಅಪಾಯ: ಉಡುಪಿ ಬಿಜೆಪಿ

KannadaprabhaNewsNetwork |  
Published : Jul 14, 2026, 02:45 AM IST
11ಬಿಜೆಪಿ | Kannada Prabha

ಸಾರಾಂಶ

ರಾಜ್ಯ ಸರ್ಕಾರ ಹೊರಡಿಸಿರುವ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ಅಧಿಸೂಚನೆ ಸಂವಿಧಾನದ ಚೌಕಟ್ಟಿಗೆ ವಿರುದ್ಧವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಡುಪಿ: ರಾಜ್ಯ ಸರ್ಕಾರ ಹೊರಡಿಸಿರುವ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ಅಧಿಸೂಚನೆ ಸಂವಿಧಾನದ ಚೌಕಟ್ಟಿಗೆ ವಿರುದ್ಧವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ದೇಶದ ಎಲ್ಲ ನಾಗರಿಕರಿಗೆ ಒಂದೇ ಪೌರತ್ವದ ತತ್ವ ಕಲ್ಪಿಸಿದ್ದು, ರಾಜ್ಯ ಸರಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಮೂಲಕ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಮುಂದಾಗಿದೆ. ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಯಾವುದೇ ಶಾಸನಬದ್ಧ ಅಧಿಕಾರವಿಲ್ಲದೆ ಶಾಶ್ವತ ನಿವಾಸಿಗಳು ಎಂಬ ಪ್ರತ್ಯೇಕ ವರ್ಗ ರಚಿಸುವುದು ಸಂವಿಧಾನದ 14ನೇ ವಿಧಿಯ ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ. ಆದ್ದರಿಂದ ಸರ್ಕಾರದ ಈ ವರ್ಗೀಕರಣ ಕಾನೂನುಬದ್ಧ ಉದ್ದೇಶ ಹೊಂದಿಲ್ಲ ಎಂಬ ಸಂಶಯಕ್ಕೂ ಕಾರಣವಾಗುತ್ತಿದೆ ಎಂದು ಕುತ್ಯಾರು ಹೇಳಿದರು.

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ, ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ರಾಜ್ಯ ಸರಕಾರ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಮೂಲಕ ಮತದಾರರಲ್ಲದವರಿಗೂ ಪೌರತ್ವ ನೀಡುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ರಾಜಕಾರಣದ ಉದ್ದೇಶದಿಂದ ಈ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಟೀಕಿಸಿದರು.ಈ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಲ್ಯಾ, ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಕ್ಷಣಾ ಸಂಸ್ಥೆ ಆರಂಭ ಹೆಮ್ಮೆ ವಿಚಾರ: ಡಾ. ಭರತ್ ಶೆಟ್ಟಿ
ಪುರಭವನದಲ್ಲಿ ಸಿತಾರ್ ವಾದನ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ