ಪಿಆರ್‌ಸಿಯಿಂದ ದೇಶದ ಭದ್ರತೆಗೆ ಧಕ್ಕೆ: ಯಶ್‌ಪಾಲ್

KannadaprabhaNewsNetwork |  
Published : Jul 15, 2026, 02:45 AM IST
ಯಶ್ಪಾಲ್ ಸುವರ್ಣ | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನಬಾಹಿರವಾಗಿ ಅಕ್ರಮ ವಲಸಿಗರನ್ನು ರಕ್ಷಿಸಿ, ಅವರನ್ನು ತನ್ನ ಓಟ್‌ಬ್ಯಾಂಕ್‌ಗಾಗಿ ಮತದಾರ ಪಟ್ಟಿಯಲ್ಲಿ ಮುಂದುವರಿಸಲು ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ನೀಡುವ ಮೂಲಕ ದೇಶದ ಅಂತರಿಕ ಭದ್ರತೆಗೆ ಧಕ್ಕೆ ತರಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನಬಾಹಿರವಾಗಿ ಅಕ್ರಮ ವಲಸಿಗರನ್ನು ರಕ್ಷಿಸಿ, ಅವರನ್ನು ತನ್ನ ಓಟ್‌ಬ್ಯಾಂಕ್‌ಗಾಗಿ ಮತದಾರ ಪಟ್ಟಿಯಲ್ಲಿ ಮುಂದುವರಿಸಲು ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ನೀಡುವ ಮೂಲಕ ದೇಶದ ಅಂತರಿಕ ಭದ್ರತೆಗೆ ಧಕ್ಕೆ ತರಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾ ದೇಶದ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ಒದಗಿಸಿ ಮತದಾನದ ಹಕ್ಕು ನೀಡುವ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.24 ವರ್ಷಗಳ ಬಳಿಕ ದೇಶದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಪ್ರಕ್ರಿಯೆಯನ್ನು ವಿಫಲಗೊಳಿಸಿ, ದೇಶವಿರೋಧಿ ಶಕ್ತಿಗಳಿಗೆ ಆಶ್ರಯ ನೀಡಿ ಕರ್ನಾಟಕವನ್ನು ಭಯೋತ್ಪಾದಕರ ತಾಣ ಮಾಡಲು ಹೊರಟಿದ್ದಾರೆ ಎಂದವರು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ತಕ್ಷಣ ಅನರ್ಹರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ತನ್ನ ನಿರ್ಧಾರವನ್ನು ಕೈಬಿಡಬೇಕು. ದೇಶದ ಅಂತರಿಕ ಭದ್ರತೆಗೆ ಆತಂಕ ಸೃಷ್ಟಿಸಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಜನತೆ ಉಗ್ರ ಪ್ರತಿಭಟನೆಯ ಮೂಲಕ ತಕ್ಕ ಉತ್ತರ ನೀಡುವ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿರಿಯ ಅರ್ಥಧಾರಿಗಳಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ
ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ