ಬಿರಾದಾರ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ

KannadaprabhaNewsNetwork |  
Published : Aug 01, 2024, 01:46 AM IST
ಮನಗೂಳೀ | Kannada Prabha

ಸಾರಾಂಶ

ಸಿಂದಗಿ ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿ ಸಂಸ್ಥೆಯನ್ನು ದಿ.ಎಂ.ಸಿ.ಮನಗೂಳಿ ಜತೆ ಸದಾ ಬೆನ್ನೆಲುಬಾಗಿ ನಿಂತು ಸಂಸ್ಥೆಯನ್ನು ಉತ್ತರ ಕರ್ನಾಟಕದಲ್ಲಿ ಗುರುತಿಸುವಂತೆ ಮಾಡುವಲ್ಲಿ ಸಂಸ್ಥೆಯ ಹಿರಿಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಪಾತ್ರ ಪ್ರಮುಖವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಮನಗೂಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿ ಸಂಸ್ಥೆಯನ್ನು ದಿ.ಎಂ.ಸಿ.ಮನಗೂಳಿ ಜತೆ ಸದಾ ಬೆನ್ನೆಲುಬಾಗಿ ನಿಂತು ಸಂಸ್ಥೆಯನ್ನು ಉತ್ತರ ಕರ್ನಾಟಕದಲ್ಲಿ ಗುರುತಿಸುವಂತೆ ಮಾಡುವಲ್ಲಿ ಸಂಸ್ಥೆಯ ಹಿರಿಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಪಾತ್ರ ಪ್ರಮುಖವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಮನಗೂಳಿ ಹೇಳಿದರು.

ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಂ.ಮನಗೂಳಿ ಕಲಾ ಮಹಾವಿದ್ಯಾಲಯದಲ್ಲಿ ನಡೆದ ಶಿವಪ್ಪಗೌಡ ಬಿರಾದಾರ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶಿವಪ್ಪಗೌಡ ಬಿರಾದಾರ ಶಿಕ್ಷಣ, ಸಾಮಾಜಿಕ, ಸಹಕಾರಿ ಕ್ಷೇತ್ರದಲ್ಲಿ ಹಲವಾರು ಸಾಧನೆ ಮಾಡಿದ್ದಾರೆ. 91 ವರ್ಷಗಳ ಜೀವನ ಸಾಗಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಅಭಿನಂದನಾ ಗ್ರಂಥ ರಚಿಸುವ ಮೂಲಕ ಅಭಿನಂದನಾ ಸಮಾರಂಭ ಏರ್ಪಡಿಸಲಾಗುವುದು ಎಂದು ಭರವಸೆ ನೀಡಿದರು.ಹಿರಿಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಮಾತನಾಡಿ, ದಿ.ಎಂ.ಸಿ.ಮನಗೂಳಿಯವರ ಒಡನಾಡಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಸಂಸ್ಥೆಯ ಬೆಳವಣಿಗೆಯಲ್ಲಿ ಎಲ್ಲ ನಿರ್ದೇಶಕರ ಪಾತ್ರಕ್ಕಿಂತಲೂ ದಿ.ಎಂ.ಸಿ.ಮನಗೂಳಿ ಅವರ ಪಾತ್ರ ಹಿರಿದಾಗಿದೆ ಎಂದು ಸ್ಮರಿಸಿದರು.ವಿಶ್ರಾಂತ ಪ್ರಾಚಾರ್ಯ ಡಾ.ವಿ.ವಿ.ಸಾಲಿಮಠ, ಎಂ.ಆರ್.ಜಂಗಮಶೆಟ್ಟಿ, ಎ.ಎಸ್.ಬಿರಾದಾರ, ಪ್ರಾಧ್ಯಾಪಕ ಡಾ.ಅರವಿಂದ್ ಮನಗೂಳಿ ಮಾತನಾಡಿದರು. ಸಭೆಯಲ್ಲಿ ನಿರ್ದೇಶಕರಾದ ಬಸನಗೌಡ ಪಾಟೀಲ, ಶಂಕರಗೌಡ ಬಿರಾದಾರ, ವಿಶ್ವನಾಥಗೌಡ ಪಾಟೀಲ, ವಿ.ಬಿ.ಕುರುಡೆ, ಬಿ.ಜಿ.ನೆಲ್ಲಗಿ, ವಿಶ್ರಾಂತ ಪ್ರಾಚಾರ್ಯ ಎಸ್.ಎಸ್.ಪಾಟೀಲ, ಜೆ.ಜೆ.ನಾರಾಯಣಕರ, ಎನ್.ಬಿ.ಪಾಟೀಲ, ಬಿ.ಜಿ.ಕಲಶೆಟ್ಟಿ, ಬಿ.ಎ.ಬಿರಾದಾರ, ಬಿ.ಜಿ.ಮಠ, ಪ್ರಾಚಾರ್ಯ ಎ.ಆರ್. ಹೆಗ್ಗನದೊಡ್ಡಿ, ಪ್ರಾಚಾರ್ಯ ಡಾ.ಬಿ.ಎಂ.ಹುರಕಡ್ಲಿ ಸೇರಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಇದ್ದರು.ಪ್ರಾಚಾರ್ಯ ಡಾ. ಬಿ.ಜಿ.ಪಾಟೀಲ ಸ್ವಾಗತಿಸಿದರು. ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿದರು. ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ