ಈವರೆಗೆ ಶೇ. 68 ರಷ್ಟು ಮಳೆ ಬಂದಿದೆ । ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ 90,090 ಹೆಕ್ಟೇರ್ ಬಿತ್ತನೆ ಗುರಿ
ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದ್ದು, ಪೂರ್ವ ಮುಂಗಾರು ಕೃಷಿಗೆ ಭೂಮಿ ಸಿದ್ಧತೆ ಚಟುವಟಿಕೆ ಚುರುಕುಗೊಂಡಿದೆ. ಅಶ್ವಿನಿ ಮಳೆ ನಕ್ಷತ್ರದಿಂದ ಉತ್ತಮ ಆರಂಭ ಪಡೆದ ಮಳೆ ಇದುವರೆಗೆ 94 ಮಿ.ಮೀ.ನಷ್ಟು (ಶೇ.68 ರಷ್ಟು ಹೆಚ್ಚು) ಬಂದಿದ್ದು, ಕೃಷಿ ಯೋಗ್ಯ ವಾತಾವರಣ ಕಲ್ಪಿಸಿಕೊಟ್ಟಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಸುಜಾತಾ ತಿಳಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ 90,090 ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದು, ಪೂರ್ವ ಮುಂಗಾರು ಹಂಗಾಮಿಗೆ 9,155 ಹೆಕ್ಟೇರ್ ಪ್ರದೇಶದಲ್ಲಿ (ನೆಲಗಡಲೆ 2,200 ಹೆಕ್ಟೇರ್, ಹೆಸರು 1,710 ಹೆಕ್ಟೇರ್, ಹತ್ತಿ 1,420 ಹೆಕ್ಟೇರ್, ಅಲಸಂದೆ 1,300 ಹೆಕ್ಟೇರ್, ಉದ್ದು 425 ಹೆಕ್ಟೇರ್, ಎಳ್ಳು 2,100 ಹೆಕ್ಟೇರ್) ಬಿತ್ತನೆ ಗುರಿ ಹೊಂದಲಾಗಿದೆ. ಬಿತ್ತನೆ ಬೀಜ ಪೂರೈಕೆ
ಪೂರ್ವ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 1009.25 ಕ್ವಿಂಟಾಲ್ ಬಿತ್ತನೆ ಬೀಜದ ಗುರಿಯಿದ್ದು, ಬೇಡಿಕೆಗೆ ಅನುಸಾರವಾಗಿ ಬಿತ್ತನೆಗೆ ಅನುಕೂಲವಾಗುವಂತೆ ಉದ್ದು, ಹೆಸರು, ಅಲಸಂದೆ, ನೆಲಗಡಲೆ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರ ಗಳಲ್ಲಿ ದಾಸ್ತಾನು ಮಾಡಲಾಗಿದ್ದು ರಿಯಾಯಿತಿ ದರದಲ್ಲಿ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ. ಬಿತ್ತನೆ ಬೀಜದಲ್ಲಿ ಯಾವುದೇ ಕೊರತೆಯಾಗಿಲ್ಲ. ಅದರಂತೆ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 4308.89 ಕ್ವಿಂಟಾಲ್ ಬಿತ್ತನೆ ಬೀಜಗಳಿಗೆ ಬೇಡಿಕೆ ಇದ್ದು, ಅಗತ್ಯವಾದ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಸಕಾಲದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಸಲು ಇಲಾಖೆ ಸಜ್ಜುಗೊಂಡಿದೆ ಎಂದು ಹೇಳಿದ್ದಾರೆ.ಅಧಿಕೃತ ಮಾರಾಟಗಾರರಿಂದ ಖರೀದಿ ಸೂಕ್ತರೈತರು ಅಧಿಕೃತ ಬಿತ್ತನೆ ಬೀಜ ಮಾರಾಟಗಾರರಿಂದಲೇ ಬಿತ್ತನೆ ಬೀಜ ಖರೀದಿಸುವುದು ಉತ್ತಮ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಸಿದಾಗ ತಪ್ಪದೇ ಅಧಿಕೃತ ರಶೀದಿ ಪಡೆಯಬೇಕು. ಬಿತ್ತನೆ ಬೀಜ ರಶೀದಿಯಲ್ಲಿ ಲಾಟ್ ನಂಬರ್ ನಮೂದಿಸಿರಬೇಕು. ಬಿತ್ತನೆ ಬೀಜದ ಚೀಲ, ಸ್ವಲ್ಪ ಪ್ರಮಾಣದ ಬಿತ್ತನೆ ಬೀಜ, ದೃಢೀಕರಣದ ಬಗ್ಗೆ ಲಗತ್ತಿಸಿರುವ ಟ್ಯಾಗ್‌ಗಳನ್ನು ಬೆಳೆ ಕಟಾವು ಆಗುವವರೆಗೆ ಸುರಕ್ಷಿತವಾಗಿ ಕಾಯ್ದಿಟ್ಟುಕೊಳ್ಳಬೇಕು.ಬಿತ್ತನೆ ಬೀಜವನ್ನು ಉಪಚರಿಸಲಾಗಿದೆಯೆ ಎಂಬುದನ್ನು ಗಮನಿಸುವುದು ಹಾಗೂ ಒಂದು ವೇಳೆ ಈ ಬಿತ್ತನೆ ಬೀಜಗಳು ಬೀಜೋಪಚಾರವಾಗಿರದಿದ್ದಲ್ಲಿ ಬೀಜದಿಂದ ಹಾಗೂ ಮಣ್ಣಿನಿಂದ ಹರಡುವ ರೋಗ ಮತ್ತು ಕೀಟಗಳಿಂದ ಬೆಳೆಗಳನ್ನು ರಕ್ಷಿಸಲು ಬೀಜವನ್ನು ಬಿತ್ತನೆಗೆ ಉಪಯೋಗಿಸುವ ಮೊದಲು ಸೂಕ್ತರೀತಿ ಉಪಚರಿಸಿ ಬಿತ್ತುವುದರಿಂದ ನಿರ್ವಹಣೆಗಳೊಂದಿಗೆ ಹೆಚ್ಚಿನ ಇಳುವರಿ ಪಡೆಯಬಹುದು.ರಸಗೊಬ್ಬರ ಪೂರೈಕೆ
ಪೋಟೋ ಫೈಲ್ ನೇಮ್ 25 ಕೆಸಿಕೆಎಂ 5