ಸಾಮೂಹಿಕ ವಾಚನದ ಮೂಲಕ ಸಂವಿಧಾನ ಪೀಠಿಕೆ ಲೋಕಾರ್ಪಣೆ
ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಇಂದು ಸಂವಿಧಾನದ ಪೀಠಿಕೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಭಾನುವಾರ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಲೋಕಾರ್ಪಣೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಭಾರತದಂತಹ ಬೃಹತ್ ರಾಷ್ಟ್ರದ ಎಲ್ಲರೂ ಒಪ್ಪಿತ ಏಕೈಕ ಸಂವಿಧಾನ ನಮ್ಮದಾಗಿದೆ. ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮದಾಗಿದೆ. ಹಲವು ರಾಜ್ಯಗಳಾಗಿ ವಿಂಗಡಣೆಯಾಗಿದ್ದರೂ, ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಟ ರಾಷ್ಟ್ರವಾಗಿ ದೇಶ ಬೆಳೆದು ನಿಂತಿದೆ ಎಂದರು.ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಭೇಟಿ ನೀಡಿದ ನೂರನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದೆ. ಅದರ ಭಾಗವಾಗಿ 2025ರ ಅಕ್ಟೋಬರ್ 2ರಿಂದ 2026ರ ಅಕ್ಟೋಬರ್ ಮಾಹೆಯವರೆಗೆ ಗಾಂಧಿ ಭಾರತ ಹೆಸರಿನಲ್ಲಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಸೊರಬ ತಾಲೂಕಿನ ಇತಿಹಾಸ ಪ್ರಸಿದ್ದ ಚಂದ್ರಗುತ್ತಿಯನ್ನು ಹಾಗೂ ಶ್ರೀ ರೇಣುಕಾಂಬ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ವಿಸ್ತøತ ಕ್ರಿಯಾಯೋಜನೆಯನ್ನು ತಯಾರಿಸಿದ್ದು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಪ್ರಾಚ್ಯವಸ್ತು ಸಂಶೋಧನಾ ಇಲಾಖೆಗೆ ಅನುಮೋದನೆಗಾಗಿ ರವಾನಿಸಲಾಗಿದೆ. ಶೀಘ್ರದಲ್ಲಿ ಅನುಮೋದನೆ ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಈಗಾಗಲೇ ಮಧ್ಯಂತರ ವರದಿಯನ್ನು ನೀಡಲಾಗಿದೆ. ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ತಜ್ಞರ ಸಭೆಯ ತೀರ್ಮಾನದಂತೆ ರಾಜ್ಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಮೈಕ್ರೋ ಫೈನಾನ್ಸ್ ದಂಧೆಗೆ ಕಠಿಣ ಕ್ರಮ
ನಗರದಲ್ಲಿ ಈ ಹಿಂದೆ ಕೈಗೊಳ್ಳಲಾದ ಸ್ಮಾರ್ಟ್‍ಸಿಟಿ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಆಗಿರಬಹುದಾದ ಲೋಪಗಳ ತನಿಖೆ ಹಾಗೂ ಪರಿಸರಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಷಾಹಿ ಎಕ್ಸ್‌ಪೋರ್ಟ್ ಕಂಪನಿಯ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದು ತಿಳಿಸಿದರು.