ಕನ್ನಡಪ್ರ ವಾರ್ತೆ ಮೂಡುಬಿದಿರೆ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮೂಡುಬಿದಿರೆ ರೋಟರಿ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡ ‘ಗರ್ಭಕಂಠದ ಕ್ಯಾನ್ಸರ್ ಮತ್ತು ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ಬಗ್ಗೆ ಅರಿವು'''''''' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ. ಸುಶಾಂತ ಪೆರ್ಡೂರು ಮಾತನಾಡಿ, ಗರ್ಭಕಂಠದಲ್ಲಿ ಆಗುವ ಬದಲಾವಣೆಗಳನ್ನು ಸ್ಕ್ರೀನಿಂಗ್ ಮೂಲಕವೇ ಪತ್ತೆಹಚ್ಚಲು ಸಾಧ್ಯ. ಗರ್ಭಕಂಠದ ಕ್ಯಾನ್ಸರ್ ಆರಂಭದಲ್ಲಿ ಯಾವುದೇ ರೋಗ ಲಕ್ಷಣಗಳನ್ನು ಹೊಂದಿರುವುದಿಲ್ಲ. ಕ್ರಮೇಣವಾಗಿ ಲಕ್ಷಣಗಳು ಕಂಡುಬರುತ್ತವೆ. ಕ್ಯಾನ್ಸರ್ ತೀವ್ರತೆಯು ಗಾತ್ರ, ಹರಡುವಿಕೆ ಮತ್ತು ಒಟ್ಟಾರೆ ಆರೋಗ್ಯದಂತಹ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದರು.ಆಳ್ವಾಸ್ ಆರೋಗ್ಯ ಕೇಂದ್ರದ ಸ್ತ್ರೀರೋಗತಜ್ಞೆ ಡಾ. ಹನಾ ಶೆಟ್ಟಿ ಮಾತನಾಡಿದರು. ಮೂಡುಬಿದಿರೆ ರೋಟರಿ ಕ್ಲಬ್‌ನ ಕಾರ್ಯದರ್ಶಿ ರತ್ನಾಕರ್ ಜೈನ್ ಇದ್ದರು. ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಐಶ್ವರ್ಯ ಎಂ.ಎನ್. ಮತ್ತು ಸಮನ್ ಸೈಯ್ಯದ್ ಕಾರ್ಯಕ್ರಮ ನಿರೂಪಿಸಿದರು.