ರಕ್ತದಾನದಿಂದ ಅಮೂಲ್ಯ ಜೀವ ಉಳಿಸಲು ಸಾಧ್ಯ: ಡಾ. ಕರುಂಬಯ್ಯ

KannadaprabhaNewsNetwork |  
Published : Oct 26, 2026, 03:45 AM IST
 | Kannada Prabha

ಸಾರಾಂಶ

ಹಾಕತ್ತೂರು ಗ್ರಾಮ ಪಂಚಾಯಿತಿ, ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಹಾಗೂ ಕೊಡಗು ಜಿಲ್ಲಾ ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಹಾಕತ್ತೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಮಡಿಕೇರಿ : ಹಾಕತ್ತೂರು ಗ್ರಾಮ ಪಂಚಾಯಿತಿ, ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಹಾಗೂ ಕೊಡಗು ಜಿಲ್ಲಾ ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಹಾಕತ್ತೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಶಿಬಿರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯರಾದ ಡಾ. ಕರುಂಬಯ್ಯ ಅವರು, ರಕ್ತದಾನವು ಅತ್ಯಂತ ಮಹತ್ವದ ಮಾನವೀಯ ಸೇವೆಯಾಗಿದೆ. ಅಪಘಾತಗಳು, ಶಸ್ತ್ರಚಿಕಿತ್ಸೆಗಳು, ಹೆರಿಗೆ ಸಂದರ್ಭಗಳು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತದ ಅವಶ್ಯಕತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ರಕ್ತದಾನಿಗಳು ನೀಡುವ ರಕ್ತವು ಜೀವ ಉಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಹಾಗೂ ಸಾರ್ವಜನಿಕರಲ್ಲಿ ರಕ್ತದಾನದ ಕುರಿತು ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.ಹಾಕತ್ತೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗೀತಾಂಜಲಿ ಅವರು, ರಕ್ತದಾನ ಶಿಬಿರಗಳ ಆಯೋಜನೆಯು ಸಮಾಜದಲ್ಲಿ ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ. ಗ್ರಾಮೀಣ ಮಟ್ಟದಲ್ಲಿ ಇಂತಹ ಆರೋಗ್ಯಪರ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಜನರಲ್ಲಿ ಜಾಗೃತಿ ಮೂಡುವುದರ ಜೊತೆಗೆ ಅಗತ್ಯವಿರುವ ರೋಗಿಗಳಿಗೆ ನೆರವಾಗಲು ಸಾಧ್ಯವಾಗುತ್ತದೆ. ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಸಂಘ-ಸಂಸ್ಥೆಗಳು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.ಹಾಕತ್ತೂರು ಗ್ರಾಮ ಪಂಚಾಯಿತಿ, ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಹಾಗೂ ಕೊಡಗು ಜಿಲ್ಲಾ ಬ್ಲಡ್ ಡೋನರ್ಸ್ ಸಂಘಟನೆಯ ಸಹಯೋಗದಲ್ಲಿ ನಡೆದ ಈ ಶಿಬಿರವು ರಕ್ತದಾನದ ಮಹತ್ವವನ್ನು ಸಾರುವ ಕಾರ್ಯಕ್ರಮವಾಗಿ ಗಮನ ಸೆಳೆಯಿತು.

ಅಧ್ಯಕ್ಷತೆ ವಹಿಸಿದ್ದ ಕೊಡಗು ಬ್ಲಡ್ ಡೋನಾರ್ ಅಧ್ಯಕ್ಷರು ಪಿ ಪಿ ಸುಕುಮಾರ್ ಮಾತನಾಡಿ, ರಕ್ತದಾನವು ಕೇವಲ ದಾನವಲ್ಲ; ಅದು ಮತ್ತೊಬ್ಬರ ಬದುಕಿನಲ್ಲಿ ಭರವಸೆಯ ಬೆಳಕು ಮೂಡಿಸುವ ಮಾನವೀಯ ಕಾರ್ಯವಾಗಿದೆ ಎಂದರು. ಕೊಡಗು ಬ್ಲಡ್, ಡೋನಾರ್ಸ್ ನಿರ್ದೇಶಕರಾದ ಲೀಲಾವತಿ. ಬಿ ಜೆ. ಹಾಜರಿದ್ದರು.

ಪಂಚಾಯಿತಿ ಸಿಬ್ಬಂದಿ ಸುನೀತಾ, ಸೋವಿಯತ್. ಅಹಮದ್. ಹಾಗೂ ಸಂಜೀವಿನಿ ಒಕ್ಕೂಟ ದ ಸದಸ್ಯರು, ಕೊಡಗು ಬ್ಲಡ್ ಡೋನಾರ್ಸ್ ಕಾರ್ಯದರ್ಶಿ ಮೈಕಲ್ ವೇಗಸ್, ಉಪಾಧ್ಯಕ್ಷ ಹನೀಫ್ ಸದಸ್ಯ ಬಶೀರ್ ಹಾಗೂ ರಕ್ತದಾನಿಗಳು. ರಕ್ತ ನಿಧಿ ಕೇಂದ್ರ ಸಿಬ್ಬಂದಿ ಹಾಜರಿದ್ದರು. ಸಂಜೀವಿನಿ ಒಕ್ಕೂಟದ ಮುಖ್ಯ ಬರಹಗಾರರಾದ ಸೌಮ್ಯ ಸ್ವಾಗತಿಸಿದರು. ಸಮುದಾಯ ಸಂಪನ್ಮೂಲ ವ್ಯಕ್ತಿ ಹರಿಣಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಶ್ಮಿ ಸಾಮಂತ್‌ಗೆ ಉಡುಪಿ ಬಿಜೆಪಿ ಅಭಿನಂದನೆ
ಮುದರಂಗಡಿ ಪ್ರಜಾಸೇವಾ ಸಭೆ: 44 ಅರ್ಜಿ ವಿಲೇ