ಹೆರಿಗೆ ವೇಳೆ ಗರ್ಭಿಣಿ ಸಾವು: ಕುಟುಂಬಸ್ಥರ ಆಕ್ರೋಶ

KannadaprabhaNewsNetwork |  
Published : Nov 18, 2026, 02:15 AM IST
ರಾಣಿಬೆನ್ನೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗರ್ಭಿಣಿ ಸಾವಿನ ಹಿನ್ನೆಲೆಯಲ್ಲಿ ಆಸ್ಪತ್ರೆ ಎದುರು ಜಮಾಯಿಸಿರುವ ಜನತೆ  | Kannada Prabha

ಸಾರಾಂಶ

ಹೆರಿಗೆ ಸಮಯದಲ್ಲಿ ಗರ್ಭಿಣಿ ಸಾವನ್ನಪ್ಪಿದ್ದರಿಂದ ಕುಟುಂಬಸ್ಥರು ಆಕ್ರೋಶಗೊಂಡ ಘಟನೆ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ.

ರಾಣಿಬೆನ್ನೂರು: ಹೆರಿಗೆ ಸಮಯದಲ್ಲಿ ಗರ್ಭಿಣಿ ಸಾವನ್ನಪ್ಪಿದ್ದರಿಂದ ಕುಟುಂಬಸ್ಥರು ಆಕ್ರೋಶಗೊಂಡ ಘಟನೆ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ.

ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ವೀಣಾ ಮಾಲತೇಶ ಗೂಲಪ್ಪನವರ (25) ಮೃತ ದುರ್ದೈವಿ.

ಈಕೆಯು ಎರಡನೇ ಹೆರಿಗೆಗಾಗಿ ಇಲ್ಲಿನ ವಿನಾಯಕ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಸಮಯದಲ್ಲಿ ಮಗು ಜನಿಸಿದ ಬಳಿಕ ತಾಯಿ ಮೃತಪಟ್ಟಿದ್ದಾಳೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಗಲಾಟೆಯ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಕುಟುಂಬಸ್ಥರ ಆರೋಪವನ್ನು ತಳ್ಳಿಹಾಕಿರುವ ವೈದ್ಯರು ಹೆರಿಗೆ ಸಮಯದಲ್ಲಿ ಗರ್ಭಿಣಿಗೆ ಹೃದಯ ಸಂಬಂಧಿತ ತೀವ್ರ ತೊಂದರೆ (ಕಾರ್ಡಿಯೊರೆಸ್ಪಿರೇಟರಿ ಸಮಸ್ಯೆ) ಉಂಟಾದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಸಮಜಾಯಿಷಿ ನೀಡಿದ್ದಾರೆ.

ಮುಂಜಾಗರೂಕತಾ ಕ್ರಮವಾಗಿ ಮಂಗಳವಾರ ಕೂಡ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ
ವಿಶ್ವಮಟ್ಟದ ಶ್ರೇಷ್ಠ ವಾಸ್ತುಶಿಲ್ಪಗಳ ತಾಣ ವಿಜಯಪುರ