ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ

KannadaprabhaNewsNetwork |  
Published : Oct 22, 2025, 01:03 AM IST
21ಎಚ್ಎಸ್ಎನ್7 :  | Kannada Prabha

ಸಾರಾಂಶ

70ನೇ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯನ್ನು ಶಾಸಕರು ಹಾಗೂ ತಹಸೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳಾದ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳೊಡನೆ ಅದ್ಧೂರಿಯಾಗಿ ನಡೆಸಬೇಕಾಗಿರುವುದರಿಂದ ತಾಲೂಕಿನ ಎಲ್ಲಾ ಇಲಾಖೆಗಳು ಭಾಗವಹಿಸಿ ತಮಗೆ ವಹಿಸುವ ಜವಾಬ್ದಾರಿಯುತ ಕೆಲಸಗಳನ್ನು ನಿರ್ವಹಿಸಬೇಕಾಗಿ ಹಾಗೂ ಎಲ್ಲಾ ಕಚೇರಿಯ ಎಲ್ಲಾ ಸಿಬ್ಬಂದಿ ಕೂಡ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.

ಅರಕಲಗೂಡು: 70ನೇ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯನ್ನು ಶಾಸಕರು ಹಾಗೂ ತಹಸೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳಾದ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರೇಡ್ 2 ತಹಸೀಲ್ದಾರ್ ಸಿ ಸ್ವಾಮಿ ಕಳೆದ ಬಾರಿ ನಡೆದಂತ ಸಭೆಯ ನಡಾವಳಿಗಳನ್ನು ಓದಿ ತಿಳಿಸಿದರು. ಬಳಿಕ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ್‌ ಮಾತನಾಡಿ, ನ. 1ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಎಲ್ಲಾ ಸಂಘಸಂಸ್ಥೆ ಹಾಗೂ ಸಾರ್ವಜನಿಕ ರೈತ ಬಾಂಧವರೊಡನೆ ಸೇರಿ ಹಾಗೂ ಶಾಲಾ ಮಕ್ಕಳೊಡನೆ ಅದ್ಧೂರಿಯಾಗಿ ನಡೆಸಬೇಕಾಗಿರುವುದರಿಂದ ತಾಲೂಕಿನ ಎಲ್ಲಾ ಇಲಾಖೆಗಳು ಭಾಗವಹಿಸಿ ತಮಗೆ ವಹಿಸುವ ಜವಾಬ್ದಾರಿಯುತ ಕೆಲಸಗಳನ್ನು ನಿರ್ವಹಿಸಬೇಕಾಗಿ ಹಾಗೂ ಎಲ್ಲಾ ಕಚೇರಿಯ ಎಲ್ಲಾ ಸಿಬ್ಬಂದಿ ಕೂಡ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ