ಸಾಹಿತ್ಯ ಸಮ್ಮೇಳನ ಅಂಗವಾಗಿ ಅ.17ರಂದು ಪೂರ್ವಭಾವಿ ಸಭೆ: ಸಿದ್ದಲಿಂಗು

KannadaprabhaNewsNetwork |  
Published : Oct 16, 2024, 12:43 AM IST
15ಕೆಎಂಎನ್ ಡಿ16 | Kannada Prabha

ಸಾರಾಂಶ

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಮಂಡ್ಯದಲ್ಲಿ ಡಿ.20 ರಿಂದ 3ದಿನಗಳ ಕಾಲ ನಡೆಯಲಿರುವ ಸಮ್ಮೇಳನ ಅಂಗವಾಗಿ ಪೂರ್ವಭಾವಿ ಸಭೆ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು ವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಮಂಡ್ಯದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಅ.17ರಂದು ಬೆಳಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲೂಕು ಅಧ್ಯಕ್ಷ ಸಿದ್ದಲಿಂಗು ತಿಳಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಮಂಡ್ಯದಲ್ಲಿ ಡಿ.20 ರಿಂದ 3ದಿನಗಳ ಕಾಲ ನಡೆಯಲಿರುವ ಸಮ್ಮೇಳನ ಅಂಗವಾಗಿ ಪೂರ್ವಭಾವಿ ಸಭೆ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು ವಹಿಸಲಿದ್ದಾರೆ ಎಂದರು.

ಕಸಾಪ ರಾಜ್ಯಾಧ್ಯಕ್ಷ ನಾಡೊಜ ಡಾ.ಮಹೇಶ್‌ ಜ್ಯೋಷಿ ಸಭೆ ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಂಚಾಲಕರಾದ ಮೀರಾಶಿವಲಿಂಗಯ್ಯ ಉಪಸ್ಥಿತಿ ಇರಲಿದ್ದಾರೆ. ಸಭೆಗೆ ಶಾಸಕರು, ತಾಲೂಕಿನ ಗ್ರಾಪಂ, ತಾಪಂ, ಜಿಪಂ ಹಾಗೂ ಪುರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮತ್ತು ಕನ್ನಡಪರ ಹೋರಾಟಗಾರರು, ಕಸಾಪ ಅಜೀವ ಸದಸ್ಯರು ಸೇರಿದಂತೆ ಪಕ್ಷಾತೀತವಾಗಿ ಎಲ್ಲರು ಭಾಗವಹಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಸ್ವಾಮೀಗೌಡ, ಮಹಿಳಾ ಆಶಾಲತಾ ಪುಟ್ಟೇಗೌಡ, ನಗರ ಘಟಕ ಅಧ್ಯಕ್ಷ ಸುರೇಶ್, ತಾಲೂಕು ಘಟಕದ ಕೋಸಾಧ್ಯಕ್ಷ ಬಸವರಾಜು, ನಿಕಟಪೂರ್ವ ಅಧ್ಯಕ್ಷ ಪುರುಷೊತ್ತಮ್ ಇದ್ದರು.ಅ.18 ರಂದು ಪೂರ್ವಭಾವಿ ಸಭೆಪಾಂಡವಪುರ:ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಅ.18 ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಕಸಾಪ ಭವನದಲ್ಲಿ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್‌ಜೋಷಿ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಕಡೆಯಲಾಗಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ, ಸಾಧಕ-ಬಾದಕಗಳು ಕುರಿತು ಚರ್ಚಿಸುವುದರ ಜತೆಗೆ ಸಾಹಿತ್ಯಾಶಕ್ತರು ಹಾಗೂ ಸಾರ್ವಜನಿಕರಿಂದ ಸಲಹೆ, ಸಹಕಾರವನ್ನು ಪಡೆಯಲು ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಕಸಾಪ ಸಂಚಾಲಕರಾದ ಡಾ.ಮೀರಶಿವಲಿಂಗಯ್ಯ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.ಪಟ್ಟಣ ಸೇರಿದಂತೆ ತಾಲೂಕಿನಿಂದ ಸಾಹಿತಿಗಳು, ಸಾಹಿತ್ಯಾಶಕ್ತರು, ಚಿಂತಕರು, ವಿವಿಧ ಸಂಘಟನೆಗಳ ಮುಖ್ಯಸ್ಥರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆ ನೀಡುವಂತೆ ಕಸಾಪ ತಾಲೂಕು ಅಧ್ಯಕ್ಷ ಮೇನಾಗರ ಪ್ರಕಾಶ್ ತಿಳಿಸಿದ್ದಾರೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ