ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ಮಹನೀಯರ ಜಯಂತಿ ಆಚರಣೆ ಸಂಬಂಧ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ ಆಚರಿಸುವ ಕುರಿತಂತೆ 20ರಂದು ಬೆಳಿಗ್ಗೆ 11ಕ್ಕೆ ಪೂರ್ವಭಾವಿ ಸಭೆ ಹಾಗೂ ಫೆಬ್ರವರಿ 5ರಂದು ಸವಿತಾ ಮಹರ್ಷಿ ಜಯಂತಿ ಆಚರಿಸುವ ಸಂಬಂಧ 20ರಂದು ಬೆಳಿಗ್ಗೆ 11.15ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸುವರು. ಸಮುದಾಯದ ಮುಖಂಡರು, ಸಾರ್ವಜನಿಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಿ ಸಲಹೆ ಸೂಚನೆ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಕೋರಿದ್ದಾರೆ.