ಪಿಪಿ ವೃತ್ತದಲ್ಲಿ ಬಸವೇಶ್ವರರ ಪ್ರತಿಮೆ ಸ್ಥಾಪನೆಗೆ ಮುನ್ನುಡಿ

KannadaprabhaNewsNetwork |  
Published : Apr 17, 2026, 01:15 AM IST
ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆದ ಶಾಸಕ ಕೆ.ಎಂ. ಶಿವಲಿಂಗೇಗೌಡ | Kannada Prabha

ಸಾರಾಂಶ

ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಬಸವೇಶ್ವರರಂತಹ ಮಹಾನ್ ಸಮಾಜ ಸುಧಾರಕರ ಪ್ರತಿಮೆ ಸ್ಥಾಪನೆ ವಿಷಯದಲ್ಲಿ ಅನಗತ್ಯ ವಿವಾದಗಳು ಉಂಟುಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಸಾರಿದ ಬಸವಣ್ಣನ ವಿಚಾರಧಾರೆಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು. ಜಾತಿ, ಮತ, ಪಕ್ಷಭೇದ ಮರೆತು ಎಲ್ಲರೂ ಒಂದಾಗಿ ಬಸವೇಶ್ವರರ ಪ್ರತಿಮೆ ಸ್ಥಾಪನೆ ಕಾರ್ಯದಲ್ಲಿ ಭಾಗವಹಿಸಬೇಕು. ಇದು ಕೇವಲ ಒಂದು ಪ್ರತಿಮೆ ನಿರ್ಮಾಣವಲ್ಲ, ಸಮಾಜಕ್ಕೆ ಒಗ್ಗಟ್ಟಿನ ಸಂದೇಶ ನೀಡುವ ಪ್ರಯತ್ನವಾಗಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ನಗರದ ಪಿಪಿ ವೃತ್ತ ಸಮೀಪ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಸ್ಥಾಪನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರಕಿದ್ದು, ಗುರುವಾರ ನಡೆದ ಭೂಮಿಪೂಜೆ ಕಾರ್ಯಕ್ರಮದ ಮೂಲಕ ಯೋಜನೆ ಹೊಸ ಹಂತಕ್ಕೆ ಪ್ರವೇಶಿಸಿದೆ. ಕೆಲವು ದಿನಗಳಿಂದ ಸ್ಥಳ ಆಯ್ಕೆ ಕುರಿತಂತೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದರೂ, ಸಮಿತಿ ನಿರ್ಧಾರಕ್ಕೆ ಮುದ್ರೆ ಬಿದ್ದಂತಾಗಿದೆ.ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಬಸವೇಶ್ವರರಂತಹ ಮಹಾನ್ ಸಮಾಜ ಸುಧಾರಕರ ಪ್ರತಿಮೆ ಸ್ಥಾಪನೆ ವಿಷಯದಲ್ಲಿ ಅನಗತ್ಯ ವಿವಾದಗಳು ಉಂಟುಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಸಾರಿದ ಬಸವಣ್ಣನ ವಿಚಾರಧಾರೆಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು. ಜಾತಿ, ಮತ, ಪಕ್ಷಭೇದ ಮರೆತು ಎಲ್ಲರೂ ಒಂದಾಗಿ ಬಸವೇಶ್ವರರ ಪ್ರತಿಮೆ ಸ್ಥಾಪನೆ ಕಾರ್ಯದಲ್ಲಿ ಭಾಗವಹಿಸಬೇಕು. ಇದು ಕೇವಲ ಒಂದು ಪ್ರತಿಮೆ ನಿರ್ಮಾಣವಲ್ಲ, ಸಮಾಜಕ್ಕೆ ಒಗ್ಗಟ್ಟಿನ ಸಂದೇಶ ನೀಡುವ ಪ್ರಯತ್ನವಾಗಿದೆ ಎಂದು ಹೇಳಿದರು.ಸಮಿತಿಯ ಜಿ.ವಿ. ಶಶಿಧರ್‌ ಮಾತನಾಡಿ, ತಾಲೂಕಿನಲ್ಲಿ ಬಸವಣ್ಣನ ಅನುಯಾಯಿಗಳ ಸಂಖ್ಯೆ ಹೆಚ್ಚಿನದಾಗಿದ್ದು, ಹಲವು ವರ್ಷಗಳಿಂದ ಪ್ರತಿಮೆ ಸ್ಥಾಪನೆಗಾಗಿ ನಿರಂತರವಾಗಿ ಬೇಡಿಕೆ ಇತ್ತು. ಇದೀಗ ಆ ಕನಸು ಸಾಕಾರಗೊಳ್ಳುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು. ಸಮಿತಿ ಅಧ್ಯಕ್ಷ ಅಡವಿಸ್ವಾಮಿ ಅವರು ಮಾತನಾಡಿ, ನಗರದ ಹೃದಯಭಾಗದಲ್ಲಿ ಬಸವೇಶ್ವರರ ಪ್ರತಿಮೆ ನಿರ್ಮಾಣ ಮಾಡುವುದರಿಂದ ಜನರಲ್ಲಿ ಭಕ್ತಿಭಾವ ಮತ್ತು ಸಾಮಾಜಿಕ ಜಾಗೃತಿ ಹೆಚ್ಚಲಿದೆ. ಈ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ಬಸವೇಶ್ವರರ ಆಶೀರ್ವಾದ ಲಭಿಸಲಿ ಎಂದು ಆಶಿಸಿದರು.ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಗಂಜಿಗೆರೆ ಚಂದ್ರಶೇಖರ್‌, ಉಪಾಧ್ಯಕ್ಷ ಜಿ.ವಿ. ಬಸವರಾಜ್, ಕಾರ್ಯದರ್ಶಿ ಜ್ಞಾನೇಶ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಶೇಖರ್ ಸೇರಿದಂತೆ ಹಲವು ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ
ನಾರಿಶಕ್ತಿ ಬಗ್ಗೆ ಪ್ರಧಾನಿ ಮೋದಿಗೆ ಅಚಲ ವಿಶ್ವಾಸ