ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 08 ಗಂಟೆಗೆ ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಕ್ರೀಡಾಂಗಣದವರೆಗೆ ತಾಯಿ ಭುವನೇಶ್ವರಿದೇವಿಯ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಜನಪ್ರತಿನಿಧಿಗಳಿಗೆ ತಲುಪಿಸಿ ಎಂದು ದೇವನಹಳ್ಳಿ ತಹಸೀಲ್ದಾರರಿಗೆ ಸೂಚಿಸಿದರು. ವೇದಿಕೆ ಮತ್ತು ಧ್ವಜ ಕಟ್ಟೆ ಅಲಂಕಾರವನ್ನು ಅಚ್ಚುಕಟ್ಟಾಗಿ ನೆರವೇರಿಸಿ, ಪಥ ಸಂಚಲನಕ್ಕೆ ಅಗತ್ಯ ಕ್ರಮ ವಹಿಸಿ ಎಂದು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು.ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಲಘು ಉಪಹಾರ ವ್ಯವಸ್ಥೆಯು ಘಾಟಿ ಸುಬ್ರಮಣ್ಯ ದೇವಸ್ಥಾನದವರು ನೀಡಲಿದ್ದು, ನಿರ್ವಹಣೆಯನ್ನು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರು ನೋಡಿಕೊಳ್ಳಬೇಕು. ಆಯಾ ಇಲಾಖೆಗಳಿಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಆರ್.ಸುಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಕುಮಾರ್, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ, ಕನ್ನಡಪರ ಸಂಘಟನೆಗಳ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.ಫೋಟೋ-
19ಕೆಡಿಬಿಪಿ1-ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು. ಜಿಪಂ ಸಿಇಒ ಡಾ.ಅನುರಾಧ, ಎಡಿಸಿ ಸುಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಕುಮಾರ್, ಕಸಾಪ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಇತರರಿದ್ದರು.