ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆ ಸುಗಮಕ್ಕೆ ಸಿದ್ಧತೆ

KannadaprabhaNewsNetwork | Published : Aug 25, 2024 1:57 AM

ಸಾರಾಂಶ

ಕೆಪಿಎಸ್ಸಿ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ನೇಮಿಸಲ್ಪಟ್ಟ ಅಧಿಕಾರಿಗಳು ಒಂದು ದಿನ ಮುಂಚಿತವಾಗಿ ಭೇಟಿ ನೀಡಿ, ಸಿಸಿ ಕ್ಯಾಮರಾ, ವಿದ್ಯುತ್ ಸಂಪರ್ಕ, ಡೆಸ್ಕ್ ಗಳು ಸುಸ್ಥಿತಿಯಲ್ಲಿರುವಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 27 ರಂದು ನಡೆಯುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷವಾಗದಂತೆ ಸುಮಗವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ ಅವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಿಕ್ಕಬಳ್ಳಾಪುರ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 6056 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಎಂದರು. ಪೂರ್ವ ಸಿದ್ಧತೆ ಮಾಡಿಕೊಳ್ಳಿ

ಕೆಪಿಎಸ್ಸಿ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ನೇಮಿಸಲ್ಪಟ್ಟ ಅಧಿಕಾರಿಗಳು ಒಂದು ದಿನ ಮುಂಚಿತವಾಗಿ ಭೇಟಿ ನೀಡಿ, ಸಿಸಿ ಕ್ಯಾಮರಾ, ವಿದ್ಯುತ್ ಸಂಪರ್ಕ, ಡೆಸ್ಕ್ ಗಳು ಸುಸ್ಥಿತಿಯಲ್ಲಿರುವಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಸಂವೀಕ್ಷಕರಿಗೆ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಉತ್ತರ ಹಾಳೆಗಳು ವಿತರಣೆಯಾಗಿರುವುದನ್ನು ಖಾತರಿ ಪಡಿಸಿಕೊಳ್ಳವುದು ಹಾಗೂ ಆಯೋಗವು ನೀಡಲಾದ ಪರೀಕ್ಷೆಗೆ ಸಂಬಂಧಿಸಿದ ವೇಳೆ ಹಾಗೂ ನಿರ್ದೇಶನಗಳನ್ನು ನಿಖರವಾಗಿ ಪಾಲಿಸಬೇಕು. ಪರೀಕ್ಷೆಯನ್ನು ನಿಯಮಬದ್ಧವಾಗಿ ನಿರ್ವಹಣೆ ಮಾಡುವಂತೆ ಸೂಚಿಸಿದರು. ಪೊಲೀಸ್ ಬಂದೋಬಸ್ತ್

ಪರೀಕ್ಷಾ ದಿನದಂದು ಮಾರ್ಗಾಧಿಕಾರಿಗಳ ತಂಡದ ಬೆಂಗಾವಲಿಗೆ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅವಶ್ಯಕತೆಗೆ ಅನುಗುಣವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಬೇಕು ಹಾಗೂ ಪರೀಕ್ಷಾ ಕೇಂದ್ರ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತವಾಗಬೇಕು. ಪರೀಕ್ಷಾ ಕೇಂದ್ರ ಸುತ್ತ-ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮವಹಿಸಬೇಕುಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜಿನಪ್ಪ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಗಾಯಿತ್ರಿ, ಜಿಲ್ಲೆಯ ಎಲ್ಲಾ ತಹಸೀಲ್ದಾರರು, ವಿಷಯ ಪರೀವಿಕ್ಷಕರಾದ ಜಮೀರ್ ಪಾಷ, ಪ್ರಥಮ ದರ್ಜೆಯ ಕಾಲೇಜುಗಳ ಪ್ರಾಂಶುಪಾಲರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.ಸಿ

Share this article