ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಿದ್ಧತೆ

KannadaprabhaNewsNetwork |  
Published : May 17, 2024, 12:40 AM IST
ಬೆಂ.ಗ್ರಾ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಸಂಬಂಧ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: 2023-24ನೇ ಸಾಲಿನ ತಾಲೂಕು ಮತ್ತು ಬೆಂಗಳೂರು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜೂ. 21ರಂದು ಹೊಸಕೋಟೆಯ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲು ನಿಗದಿಪಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೊಡ್ಡಬಳ್ಳಾಪುರ: 2023-24ನೇ ಸಾಲಿನ ತಾಲೂಕು ಮತ್ತು ಬೆಂಗಳೂರು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜೂ. 21ರಂದು ಹೊಸಕೋಟೆಯ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲು ನಿಗದಿಪಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ನಡೆದ 2023-24ನೇ ಸಾಲಿನ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳ ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಜೂ. 21ರಂದು ಹೊಸಕೋಟೆ ಟೌನ್ ನಲ್ಲಿರುವ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್, ಕ್ರೀಡಾಪಟುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ತಾಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿ, ತಹಸೀಲ್ದಾರ್, ಇಒಗಳ ನೇತೃತ್ವದಲ್ಲಿ ಹಾಗೂ ಶಿಷ್ಟಾಚಾರದಂತೆ ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಸಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಹೊಸಕೋಟೆ ತಹಸೀಲ್ದಾರ್ ವಿಜಯ್ ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಟಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು, ದೈಹಿಕ ಶಿಕ್ಷಣ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.16ಕೆಡಿಬಿಪಿ1-

ಬೆಂ.ಗ್ರಾ. ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಸಂಬಂಧ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ