ಹುಬ್ಬಳ್ಳಿ:
ಬೆಂಗಳೂರಿನ ಸ್ಲಂ ಬೋರ್ಡ್‌ನ ಕೇಂದ್ರ ಕಚೇರಿಯಲ್ಲಿ ಮಂಡಳಿಯು ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರಿ ಮತ್ತು ಸ್ಧಳೀಯ ಸಂಸ್ಧೆಗಳ ಮಾಲಿಕತ್ವದಲ್ಲಿರುವ 1821 ಘೋಷಿತ ಕೊಳಗೇರಿ ಪ್ರದೇಶಗಳಲ್ಲಿ ವಾಸವಾಗಿರುವ 3.36 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಮಂಡಳಿಯಿಂದ ಕೊಳಗೇರಿ ನಿವಾಸಿಗಳ ಸಮೀಕ್ಷೆ ಕಾರ್ಯಕೈಗೊಂಡು ಈ ವರೆಗೂ 68,415 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಮಂಡಳಿ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ್ (ಸರ್ವರಿಗೂ ಸೂರು) ಯೋಜನೆಯ ಅಡಿ 1,80,253 ಮನೆ ನಿರ್ಮಾಣ ಕಾಮಗಾರಿ ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ನಡೆಯುತ್ತಿದೆ. ಕಾಮಗಾರಿಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯ ಬಗ್ಗೆ ಪರಿಶೀಲಿಸಿ, ಹಕ್ಕುಪತ್ರ ವಿತರಣೆಯಲ್ಲಿ ವಿಳಂಬವಾದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಆಯುಕ್ತ ಡಾ. ಅಶೋಕ .ಡಿ.ಆರ್, ಮುಖ್ಯ ಎಂಜಿನಿಯರ್ ಎನ್.ಪಿ. ಬಾಲರಾಜು ಮತ್ತು ತಾಂತ್ರಿಕ ನಿರ್ದೇಶಕರು, ಮಂಡಳಿ ನಿರ್ದೇಶಕರು, ಸದಸ್ಯರು, ಹಿರಿಯ ಅಧಿಕಾರಿಗಳಿದ್ದರು.