ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಸಭೆ ನಡೆಸಿದ ತುಷಾರ್ ಗಿರಿನಾಥ್, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯ ನಡೆಯುವ ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತ ಎಣಿಕೆ ಕೇಂದ್ರಗಳ ಬಳಿ ಸಿಸಿಟಿವಿ ಹಾಗೂ ವಿಡಿಯೋ ವ್ಯವ್ಯಸ್ಥೆ ಮಾಡಬೇಕು. ಮತ ಎಣಿಕೆ ಕೇಂದ್ರಗಳಲ್ಲಿ ಸ್ಥಾಪಿಸುವ ಮಾಧ್ಯಮ ಕೇಂದ್ರಗಳಲ್ಲಿ ಮಾಹಿತಿ ಒದಗಿಸುವುದಕ್ಕೆ ವ್ಯವಸ್ಥೆ ಮಾಡಬೇಕು. ಮಾಧ್ಯಮ ಪ್ರತಿನಿಧಿಗಳಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ನಿರ್ದೇಶಿಸಿದ್ದಾರೆ.ಮತ ಎಣಿಕೆ ಸಿಬ್ಬಂದಿಯನ್ನು ನಿಯೋಜಿಸಿ ತರಬೇತಿಯನ್ನು ನೀಡಲಾಗಿದೆ. ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಂಚೆ ಮತ ಪತ್ರ ಎಣಿಕೆಯನ್ನು ಸರಿಯಾಗಿ ಮಾಡಬೇಕೆಂದು ಸೂಚಿಸಿದರು.
ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ವಿನೋತ್ ಪ್ರಿಯಾ, ಸ್ನೇಹಲ್, ದಯಾನಂದ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿಚಂದ್ರ ನಾಯ್ಕ್ ಉಪಸ್ಥಿತರಿದ್ದರು.ಮತ ಎಣಿಕೆ ನಡೆಯುವ ಸ್ಥಳಗಳುಲೋಕಸಭಾ ಕ್ಷೇತ್ರಮತ ಎಣಿಕಾ ಕೇಂದ್ರಬೆಂಗಳೂರು ಕೇಂದ್ರಮೌಂಟ್ ಕಾರ್ಮೆಲ್ ಕಾಲೇಜು, ಅರಮನೆ ರಸ್ತೆ, ವಸಂತನಗರಬೆಂಗಳೂರು ಉತ್ತರಸೇಂಟ್ ಜೋಸೆಫ್ ಕಾಲೇಜು, ಮಲ್ಯ ರಸ್ತೆ
ಬೆಂಗಳೂರು ದಕ್ಷಿಣಎಸ್.ಎಸ್.ಎಂ.ಆರ್.ವಿ ಕಾಲೇಜು, 9ನೇ ಬ್ಲಾಕ್, ಜಯನಗರ