ಕಾಂಗ್ರೆಸ್ ನಿಂದ ವಿಭಿನ್ನ ಗಾಂಧಿ ಜಯಂತಿ ಆಚರಣೆಗೆ ಸಿದ್ಧತೆ

KannadaprabhaNewsNetwork |  
Published : Oct 02, 2024, 01:12 AM IST
1ಕೆಆರ್ ಎಂಎನ್ 11.ಜೆಪಿಜಿಶಾಸಕ ಇಕ್ಬಾಲ್ ಹುಸೇನ್ ಸಭೆಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ರಾಮನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಬೆಳಗಾವಿ ಅಧಿವೇಶನ ನಡೆಸಿ 100 ವರ್ಷಗಳು ಸಂದಿದ್ದು, ಅದರ ಸವಿನೆನೆಪಿನ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಅ.2 ರಂದು ಗಾಂಧಿ ಜಯಂತಿ ಆಚರಣೆ ಮಾಡುವ ಸಂಬಂಧ ಶಾಸಕ ಇಕ್ಬಾಲ್‌ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

ರಾಮನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಬೆಳಗಾವಿ ಅಧಿವೇಶನ ನಡೆಸಿ 100 ವರ್ಷಗಳು ಸಂದಿದ್ದು, ಅದರ ಸವಿನೆನೆಪಿನ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಅ.2 ರಂದು ಗಾಂಧಿ ಜಯಂತಿ ಆಚರಣೆ ಮಾಡುವ ಸಂಬಂಧ ಶಾಸಕ ಇಕ್ಬಾಲ್‌ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರ ಸಲಹೆ ಮಾರ್ಗದರ್ಶನ ಪಡೆದು ಮಾತನಾಡಿದ ಅವರು, ಪ್ರತಿವರ್ಷ ಅ.2ರಂದು ರಾಷ್ಟ್ರಪಿತನ ಜಯಂತಿ ಆಚರಣೆ ಮಾಡುತ್ತೇವೆ. ಅದರಂತೆ ಈ ವರ್ಷ ವಿಶೇಷವಾಗಿ ಅವರು ನೇತೃತ್ವ ವಹಿಸಿದ್ದ ಬೆಳಗಾವಿ ಅಧಿವೇಶನ ನಡೆದು 100 ವರ್ಷಗಳಾಗಿವೆ. ಆ ನೆನಪಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜಾಥಾ ನಡೆಸಿ ಅವರನ್ನು ಸ್ಮರಿಸುವಂತೆ ಸೂಚಿಸಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರೂ ಬಿಳಿ ಬಣ್ಣದ ಶರ್ಟ್, ಟೋಪಿ ಧರಿಸಿ ಬರಬೇಕು, ಜೂನಿಯರ್ ಕಾಲೇಜು ಬಳಿಯಿಂದ ಎಂ.ಜಿ.ರಸ್ತೆ ಮೂಲಕ ಕಾಲ್ನಡಿಗೆಯಲ್ಲಿ ಜಾಥಾ ಬಂದು ಅಂಬೇಡ್ಕರ್ ಭವನದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಮತ್ತು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಅವರು ಭಾಷಣವನ್ನು ಜೋಮ್ ನಲ್ಲಿ ಕೇಳೋಣ. ಹಾಗಾಗಿ ಕ್ಷೇತ್ರದ ಪ್ರತಿ ಗ್ರಾಪಂ, ನಗರದ ವಾರ್ಡ್ ವ್ಯಾಪ್ತಿಗಳಿಂದ ತಲಾ ಕನಿಷ್ಠ 100 ಜನರು ದೇಶದ ಬಗ್ಗೆ ಗೌರವ ಇಟ್ಟು ಎಲ್ಲರೂ ಭಾಗವಹಿಸಿ ಮಹಾತ್ಮ ಗಾಂಧೀಜಿ ಅವರನ್ನು ಸ್ಮರಿಸುವ ಮುಖೇನ ಕಾರ್ಯಕ್ರಮವನ್ನು ಯಶಸ್ವಿ ಮಾಡೋಣ ಎಂದರು.

ನಗರಸಭೆ ಸದಸ್ಯ ಹಾಗೂ ಎಂಇಐ ಮಾಜಿ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ), ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ರಾಜು ಮಾತನಾಡಿ, ಕಾರ್ಯಕ್ರಮ ನಡೆಸುವ ಬಗ್ಗೆ ಸಲಹೆಗಳನ್ನು ವ್ಯಕ್ತಪಡಿಸಿದರು. ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಚ್.ರಾಜು, ಹಾರೋಹಳ್ಳಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್‌ಕುಮಾರ್, ಮಾಜಿ ಅಧ್ಯಕ್ಷ ಸಿ.ಎನ್.ಆರ್ ವೆಂಕಟೇಶ್, ಬಮೂಲ್ ನಿರ್ದೇಶಕ ಹರೀಶ್‌ಕುಮಾರ್, ಹಿಂದುಳಿದ ಘಟಕದ ಅಧ್ಯಕ್ಷ ರೈಡ್‌ ನಾಗರಾಜು ಸೇರಿದಂತೆ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರಸಭೆ ಸದಸ್ಯರು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯವಾಗಿ ಗೂಗ್ಲಿ ಹಾಕ್ಬೇಕು, ಇಲ್ಲದಿದ್ರೆ ಯಶಸ್ಸು ಸಿಗಲ್ಲ: ಸತೀಶ್‌
ಮರ್ಯಾದಾ ಹತ್ಯೆಯಂಥ ಕೃತ್ಯ ತಡೆಗೆ ವಿಶೇಷ ಕಾನೂನು : ಸಿಎಂ