ಹೊಸೂರಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಸಿದ್ಧತೆ

KannadaprabhaNewsNetwork |  
Published : Jun 28, 2024, 02:20 AM ISTUpdated : Jun 28, 2024, 08:59 AM IST
aeroplane

ಸಾರಾಂಶ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ.

ಚೆನ್ನೈ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಆರಂಭಕ್ಕೆ ಸಿದ್ಧತೆ ಆರಂಭಿಸಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಈ ಕುರಿತ ಘೋಷಣೆ ಮಾಡಿದೆ.

ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ತಮಿಳುನಾಡಿದ ಗಡಿ ಜಿಲ್ಲೆಗಳಾದ ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೈಗಾರಿಕಾ ಅಗತ್ಯಗಳನ್ನು ಪೂರೈಸಲು ಮತ್ತು ವರ್ಷಕ್ಕೆ 30 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದೊಂದಿಗೆ ಹೊಸೂರಿನಲ್ಲಿ 2 ಸಾವಿರ ಎಕರೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಹೇಳಿದರು.

ತಮಿಳುನಾಡಿನಿಂದ ಮೋಟಾರು ವಾಹನಗಳು, ಪೂರಕಗಳು, ಚರ್ಮದ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳು ಬೇರೆ ಕಡೆಗೆ ರಫ್ತಾಗುತ್ತಿವೆ. ಈ ನಿಟ್ಟಿನಲ್ಲಿ 2030 ರ ವೇಳೆಗೆ ರಾಜ್ಯವನ್ನು ಒಂದು ಟ್ರಿಲಿಯನ್ ಯುಎಸ್ ಡಾಲರ್ ಆರ್ಥಿಕತೆಯನ್ನಾಗಿ ಪರಿವರ್ತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.

ಕಳೆದ ಕೆಲವು ವರ್ಷಗಳಿಂದ ಹೊಸೂರು ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಹೂಡಿಕೆ ಮಾಡುತ್ತಿರುವವರ ಸಂಖ್ಯೆ ಏರಿಕೆ ಮಾಡುತ್ತಿದ್ದಾರೆ. ಹೊಸೂರನ್ನು ಪ್ರಮುಖ ಆರ್ಥಿಕ ಅಭಿವೃದ್ಧಿ ಕೇಂದ್ರವಾಗಿ ಪರಿವರ್ತಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ರೂಪಿಸಿದೆ. ಈ ವಿಮಾನ ನಿಲ್ದಾಣವು ರಾಜ್ಯದ ಹೊಸೂರು, ಕೃಷ್ಣಗಿರಿ ಮತ್ತು ಧರ್ಮಪುರಿ ಪ್ರದೇಶಗಳ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ