ಮಹನೀಯರ ಜಯಂತಿ ಅದ್ಧೂರಿ ಆಚರಣೆಗೆ ಸಿದ್ಧತೆ

KannadaprabhaNewsNetwork |  
Published : Apr 01, 2026, 02:15 AM IST
31ಕೆಕೆಆರ್1:ಕುಕನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಬ್ಬರು ಮಹನೀಯರ ಜಯಂತಿ ಕಾರ್ಯಕ್ರಮದ ಪ್ರಯುಕ್ತ ಜರುಗಿದ ಪೂರ್ವ ಭಾವಿ ಸಭೆ ಜರುಗಿತು.  | Kannada Prabha

ಸಾರಾಂಶ

ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಎಷ್ಟು ಇದಿಯೋ? ಅಷ್ಟೇ ಜವಾಬ್ದಾರಿ ಸಮಾಜದ ಮುಖಂಡರುಗಳಲ್ಲಿ ಇದೆ.

ಕುಕನೂರು: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಹಾಗೂ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ ಜಯಂತಿ ತಾಲೂಕಾಡಳಿತದಿಂದ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಾರ್ವಜನಿಕರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಹಸೀಲ್ದಾರ ಬಸವರಾಜ ಬೆಣ್ಣೆಶಿರೂರು ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಬ್ಬರು ಮಹನೀಯರ ಜಯಂತಿ ಕಾರ್ಯಕ್ರಮದ ಪ್ರಯುಕ್ತ ಜರುಗಿದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಬ್ಬರು ಮಹನೀಯರ ಜಯಂತಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಏ.14 ರಂದು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುವುದು. ಇಬ್ಬರು ಮಹಾನ್ ಪುರುಷರು ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ, ಅವರ ಕೊಡುಗೆ ಇಂದಿನ ಪೀಳಿಗೆಗೆ ತಿಳಿಸುವಂತಹ ಅರ್ಥ ಪೂರ್ಣ ಕಾರ್ಯಕ್ರಮ ಮಾಡೋಣ, ಈ ಜಯಂತಿ ಯಾವುದೋ ಒಂದು ಸಮಾಜಕ್ಕೆ ಮಾತ್ರ ಸೀಮಿತವಾಗಿಲ್ಲ. ಇಡೀ ಮಾನವ ಕುಲಕ್ಕೆ ಸಂಬಂಧಿಸಿದಾಗಿದೆ. ಹಾಗಾಗಿ ಎಲ್ಲ ವರ್ಗದ ನಾಗರಿಕರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಪಪಂ ಸದಸ್ಯ ರಾಮಣ್ಣ ಬಂಕದಮನಿ ಮಾತನಾಡಿ, ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಎಷ್ಟು ಇದಿಯೋ? ಅಷ್ಟೇ ಜವಾಬ್ದಾರಿ ಸಮಾಜದ ಮುಖಂಡರುಗಳಲ್ಲಿ ಇದೆ. ನಾವು ಸ್ವಯಂ ಪ್ರೇರಿತರಾಗಿ ನಮ್ಮ ಕುಟುಂಬದ ಸದಸ್ಯರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬಂದು ನಮ್ಮ ಜವಾಬ್ದಾರಿ ನಿರ್ವಹಿಸಿದರೆ ಅಚ್ಚುಕಟ್ಟಾಗಿ ಮಹಾನ್ ನಾಯಕರ ಜಯಂತಿ ಅರ್ಥಪೂರ್ಣವಾಗಿ ಆಚರಿಸಿದಂತಾಗುತ್ತದೆ ಎಂದರು.

ತಾಪಂ ಇಒ ಸಂತೋಷ್ ಪಾಟೀಲ್ ಬಿರಾದಾರ್, ಪಪಂ ಮುಖ್ಯಾಧಿಕಾರಿ ನಾಗೇಶ್, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಶಶಿಧರ ಸಕ್ರಿ, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ಯಮನೂರಪ್ಪ ಗೋರ್ಲೆಕೊಪ್ಪ, ಮುಖಂಡ ಶಿವಪ್ಪ ಭಂಡಾರಿ, ಬಸವರಾಜ ಬೂದುಗುಂಪ, ಮಧು ಕಲ್ಮನಿ, ರಾಮಣ್ಣ ಭಜಂತ್ರಿ, ಲಕ್ಷ್ಮಣ್ ಕಾಳಿ, ಜುಂಜಪ್ಪ ಸಾಲ್ಮನಿ, ಮಲಿಯಪ್ಪ ಅಣ್ಣಿಗೇರಿ, ಬಸವರಾಜ ಜಂಗ್ಲಿ, ನಾಗಪ್ಪ ಕಲ್ಮನಿ, ರುದ್ರಪ್ಪ ಭಂಡಾರಿ, ಶರಣಪ್ಪ ಹಿರೇಮನಿ, ರಮೇಶ ಶಾಸ್ತ್ರಿ, ಪಕ್ಕಪ್ಪ ಸಾಲ್ಮನಿ, ಮಹೇಶ್ ದೊಡ್ಡಮನಿ, ಶಂಕರ ಭಂಡಾರಿ, ನಿಂಗಪ್ಪ ಗೋರ್ಲೆಕೊಪ್ಪ, ರಾಘವೇಂದ್ರ ಕಾತರಕಿ, ಈಶಪ್ಪ ಶಿರೂರು, ಶ್ರೀಧರ ಭಂಡಾರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕವಡ್ಡಟ್ಟಿಯ ಗಲಾಟೆ ಮರುಕಳಿಸದಿರಲಿ: ಡಾ. ನಂದಾ ಹಣಬರಟ್ಟಿ
ಅಧಿಕಾರಿಗಳು ಆಹ್ವಾನಿಸಿಲ್ಲವೆಂದು ಪೂರ್ವಭಾವಿ ಸಭೆಗೆ ಮುಖಂಡರ ಬಹಿಷ್ಕಾರ