ಗಣರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ

KannadaprabhaNewsNetwork |  
Published : Jan 17, 2025, 12:45 AM IST
೧೬ಕೆಎಲ್‌ಆರ್-೮ಕೋಲಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ೭೬ನೇ ಗಣರಾಜ್ಯೋತ್ಸವನ್ನು ಆಚರಿಸುವ ಕುರಿತು ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಎಡಿಸಿ ಮಂಗಳ ಮಾತನಾಡಿದರು. | Kannada Prabha

ಸಾರಾಂಶ

ಜ.೨೬ರಂದು ಬೆಳಗ್ಗೆ ೯ ಗಂಟೆಗೆ ಸರ್‌ ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಧ್ವಜಾರೋಹಣ ನೆರವೇರಿಸಲಿದ್ದು, ಶಾಲಾ ಮಕ್ಕಳು, ಎನ್‌ಸಿಸಿ, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ನಾನಾ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲು ಕ್ರಮವಹಿಸಬೇಕು.

ಕನ್ನಡಪ್ರಭ ವಾರ್ತೆ ಕೋಲಾರ೭೬ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಡಿಸಿ ಮಂಗಳ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ೭೬ನೇ ಗಣರಾಜ್ಯೋತ್ಸವನ್ನು ಆಚರಿಸುವ ಸಲುವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮಾರಂಭವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಜ.೨೬ರಂದು ಬೆಳಗ್ಗೆ ೯ ಗಂಟೆಗೆ ಸರ್‌ ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಧ್ವಜಾರೋಹಣ ನೆರವೇರಿಸಲಿದ್ದು, ಶಾಲಾ ಮಕ್ಕಳು, ಎನ್‌ಸಿಸಿ, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ನಾನಾ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.ಮುನ್ನೆಚ್ಚರಿಕೆ ವಹಿಸಬೇಕು

ಕಾರ್ಯಕ್ರಮದ ಸಿದ್ಧತೆ ಕುರಿತು ಕ್ರೀಡಾಂಗಣದ ಸ್ವಚ್ಛತೆ, ವೇದಿಕೆ, ಶಾಮಿಯಾನ, ಆಸನ ವ್ಯವಸ್ಥೆ ಕುರಿತಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ದತೆ ಕೈಗೊಳ್ಳಬೇಕು. ನಾಡು ನುಡಿ ಪ್ರೇಮ ಬಿಂಬಿಸುವ ನಾಡಗೀತೆ, ರೈತಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಬೇಕು. ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯುತ್‌ನಲ್ಲಿ ಯಾವುದೇ ಆಡಚಣೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಕೈಗೊಳ್ಳಬೇಕು ಹಾಗೂ ಯಾವುದೇ ಅವಘಡ ಸಂಭವಿಸದಂತೆ ಅಗ್ನಿಶಾಮಕ ದಳ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು ಹಾಗೂ ಆರೋಗ್ಯ ಇಲಾಖೆಯಿಂದ ಅಂಬ್ಯುಲೆನ್ಸ್ ವ್ಯವಸ್ಥೆ ಮತ್ತು ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಬೇಕು. ಅಲ್ಲದೆ ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮದ ಜವಾಬ್ದಾರಿಗಳನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.ರಾಷ್ಟ್ರಧ್ವಜಾರೋಹಣ ಕಡ್ಡಾಯ

ಪ್ರತಿಯೊಂದು ಕಚೇರಿಯ ಮುಂದೆ ಜ.೨೬ರಂದು ಬೆಳಿಗ್ಗೆ ೮ ಗಂಟೆಗೆ ಕಡ್ಡಾಯವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕು. ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ಮಾಡಬೇಕು. ಧ್ವಜದ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಬೆಳಗ್ಗೆ ೮.೪೫ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರುವಂತೆ ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಡಾ. ಪ್ರವೀಣ್ ಪಿ.ಬಾಗೇವಾಡಿ, ಅಬಕಾರಿ ಉಪ ಆಯುಕ್ತೆ ಸಯೀದಾ ಆಜ್ಮತ್ ಅಫ್ರೀನ್, ಡಿವೈಎಸ್‌ಪಿ ಮಂಜುನಾಥ್, ತಹಸೀಲ್ದಾರ್ ನಯನ, ಡಿಡಿಪಿಐ ಕೃ?ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು