ಆಕರ್ಷಕ ಹಾಗೂ ಜಾನಪದ ಕಲಾತಂಡಗಳೊಡನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ರಾಜ್ಯೋತ್ಸವದ ಅಂಗವಾಗಿ ಕಲೆ, ಸಾಹಿತ್ಯ, ಜಾನಪದ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನ ನೀಡಲಾಗುವುದು. ಕನ್ನಡ ಭಾಷೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 125ಕ್ಕೆ 125, ಪಿಯುಸಿ ಪರೀಕ್ಷೆಯಲ್ಲಿ 100ಕ್ಕೆ 100 ಹಾಗೂ ಪದವಿ ಅಥವಾ ಐಚ್ಛಿಕ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೂ ಗೌರವ ಸಲ್ಲಿಸಲಾಗುವುದು ಎಂದ ಹೇಳಿದರು. ಈ ಗೌರವಕ್ಕಾಗಿ ಆಸಕ್ತರು ಅಕ್ಟೋಬರ್ 28ರೊಳಗೆ ತಾಲೂಕು ಆಡಳಿತಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ನಗರದ ಹಳೆಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅದ್ಧೂರಿಯಾಗಿ ಆಚರಿಸಲು ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ತೀರ್ಮಾನಿಸಿದೆ ಎಂದು ಶಾಸಕ ಕೆ. ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.
ತಾಲೂಕು ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಆಕರ್ಷಕ ಹಾಗೂ ಜಾನಪದ ಕಲಾತಂಡಗಳೊಡನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ರಾಜ್ಯೋತ್ಸವದ ಅಂಗವಾಗಿ ಕಲೆ, ಸಾಹಿತ್ಯ, ಜಾನಪದ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನ ನೀಡಲಾಗುವುದು. ಕನ್ನಡ ಭಾಷೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 125ಕ್ಕೆ 125, ಪಿಯುಸಿ ಪರೀಕ್ಷೆಯಲ್ಲಿ 100ಕ್ಕೆ 100 ಹಾಗೂ ಪದವಿ ಅಥವಾ ಐಚ್ಛಿಕ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೂ ಗೌರವ ಸಲ್ಲಿಸಲಾಗುವುದು ಎಂದ ಹೇಳಿದರು. ಈ ಗೌರವಕ್ಕಾಗಿ ಆಸಕ್ತರು ಅಕ್ಟೋಬರ್ 28ರೊಳಗೆ ತಾಲೂಕು ಆಡಳಿತಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದರು.
ತಹಸೀಲ್ದಾರ್ ಎಂ.ಜಿ. ಸಂತೋಷ್ ಕುಮಾರ್ ಮಾತನಾಡಿ, ನಗರದ ಎಲ್ಲಾ ಇಲಾಖೆಗಳಲ್ಲಿ ವಿದ್ಯುತ್ ದೀಪಾಲಂಕಾರ ಹಾಗೂ ಕನ್ನಡ ಬಾವುಟಗಳು ಕಂಗೊಳಿಸಬೇಕು ಎಂದರು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಕಸಾಪ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ಬಾಬು ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.