ಬರದ ನಡುವೆಯೂ ಮಕರ ಸಂಕ್ರಾತಿಗೆ ಸಿದ್ಧತೆ

KannadaprabhaNewsNetwork |  
Published : Jan 15, 2026, 01:45 AM IST
ಬರದ ನಡುವೆಯೂ ಮಕರ ಸಂಕ್ರಾತಿಗೆ ಸಿದ್ದತೆ | Kannada Prabha

ಸಾರಾಂಶ

ವರ್ಷದ ಮೊದಲ ಹಬ್ಬದ ಮಕರ ಸಂಕ್ರಾಂತಿ ಆಚರಣೆಗೆ ಬರದ ನಡುವೆಯೂ ಜಿಲ್ಲೆಯಾದ್ಯಂತ ಜನರು ಸಂಭ್ರಮದಿಂದ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ವರ್ಷದ ಮೊದಲ ಹಬ್ಬದ ಮಕರ ಸಂಕ್ರಾಂತಿ ಆಚರಣೆಗೆ ಬರದ ನಡುವೆಯೂ ಜಿಲ್ಲೆಯಾದ್ಯಂತ ಜನರು ಸಂಭ್ರಮದಿಂದ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಈ ವರ್ಷ ಎಳ್ಳು-ಬೆಲ್ಲದ ಸವಿಯ ಜತೆಗೆ ಬೇವಿನ ಕಹಿಯನ್ನೂತಂದಿದೆ.ಇದ್ದ ಅಲ್ಪಸ್ವಲ್ಪ ಬೆಳೆಗಳ ಒಕ್ಕಣೆ ಮುಗಿಸಿ ಸಂಕ್ರಾಂತಿಯ ಹಬ್ಬಆಚರಣೆಗೆ ರೈತರು ಸಿದ್ಧರಾಗಿದ್ದಾರೆ.ಅದರಂತೆ ಹಬ್ಬದ ಮುನ್ನಾ ದಿನವಾದ ಭಾನುವಾರ ನಗರದಲ್ಲಿ ಖರೀದಿ ಭರಾಟೆ ಜೋರಾಗಿತ್ತು.

ಮಳೆಯ ಕೊರತೆಯಿಂದಾಗಿ ಮಳೆಯಾಶ್ರಿತ ಪ್ರದೇಶದಲ್ಲಿ ಬರ ಆವರಿಸಿದೆ. ಹೀಗಾಗಿ ಮಳೆಯಾಶ್ರಿತ ಪ್ರದೇಶದಲ್ಲಿ ಸುಗ್ಗಿಯ ಸಂಭ್ರಮ ಅಷ್ಟಾಗಿ ಕಾಣದಿದ್ದರೂ, ಸಂಪ್ರದಾಯದ ಹಬ್ಬಆಚರಣೆಗೆ ಸಿದ್ದತೆಯಲ್ಲಿದ್ದಾರೆ. ಬರ, ನೀರಿನ ಅಲಭ್ಯತೆಯಿಂದ ಬೆಳೆದ ಬೆಳೆಯೂ ಒಣಗಿ ಬೆಳೆನಷ್ಟ ಸಂಭವಿಸಿದೆ.ನೀರಿನಕೊರತೆ ನಡುವೆಯೂಅಲ್ಪಸ್ವಲ್ಪ ಬೆಳೆ ಉಳಿಸಿಕೊಂಡಿರುವ ಕೆರೆ, ಪಂಪ್‌ಸೆಟ್ ಆಶ್ರಿತ ಹಾಗೂ ನದಿಯಂಚಿನ ಜಮೀನುಗಳ ರೈತರ ಕೈಗೆ ಒಂದಷ್ಟು ಫಸಲು ಸಿಕ್ಕಿದೆ.ಬೆಳೆದಿರುವ ಬೆಳೆಗಳಿಗೆ ಉತ್ತಮ ಬೆಲೆಯಿದೆ. ಆದರೆ, ಖರೀದಿ ಕೇಂದ್ರಗಳನ್ನು ಸಕಾಲದಲ್ಲಿ ತೆರೆಯದ ಕಾರಣ ರೈತರು ಬೆಳೆದ ಫಸಲು ಬಹುತೇಕ ಮಧ್ಯವರ್ತಿಗಳ ಪಾಲಾಗಿದೆ.

ಸುಗ್ಗಿಯ ಸಂಕೇತವಾದ ಸಂಕ್ರಾಂತಿ ಹಬ್ಬದಲ್ಲಿ ರಾಸುಗಳಿಗೆ ಹೆಚ್ಚು ಮಾನ್ಯತೆ. ಹೀಗಾಗಿ ರೈತರುತಮ್ಮ ಬೆನ್ನೆಲುಬಾದ ಎತ್ತುಗಳು ಜಾನುವಾರುಗಳನ್ನು ಸಿಂಗರಿಸಲು ಆಲಂಕಾರಿಕ ವಸ್ತುಗಳನ್ನು ಖರೀದಿಸಿದರು, ಸಂಕ್ರಾಂತಿ ಪ್ರಯುಕ್ತ ನಗರದ ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ,ರಥದ ಬೀದಿ, ಹಳೆ ಖಾಸಗಿ ಬಸ್ ನಿಲ್ದಾಣಗಳಲ್ಲಿ . ಹಣ್ಣು, ಹೂವು ತರಕಾರಿ, ದಿನಸಿ ವಸ್ತುಗಳು, ಮಕ್ಕಳಿಗೆ ಹೊಸ ಉಡುಪುಗಳನ್ನು ಖರೀದಿಸುತ್ತಿದ್ದರು. ಹೆಣ್ಣು ಮಕ್ಕಳು ಎಳ್ಳು ಬೀರಲುಉಪಯೋಗಿಸುವ ಸಕ್ಕರೆ ಅಚ್ಚು, ಬಿಳಿಎಳ್ಳು, ಬೆಲ್ಲಕೊಬ್ಬರಿ ಬೆಲೆಯೂ ಹೆಚ್ಚಾಗಿದ್ದರು ಅಗತ್ಯಕ್ಕೆ ತಕ್ಕಂತೆ ಖರೀದಿಸಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ