ಮತದಾರರ ಪಟ್ಟಿ ತಯಾರಿಕೆಗೆ ಸಿದ್ಧತೆ ಶುರು

KannadaprabhaNewsNetwork |  
Published : Oct 01, 2025, 01:00 AM IST
30ಡಿಡಬ್ಲೂಡಿ6ಪಶ್ಚಿಮ ಪದವೀಧರರ ಚುನಾವಣೆ ವಿಷಯವಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಂಗಳವಾರ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆ.  | Kannada Prabha

ಸಾರಾಂಶ

ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವ ನಮೂನೆಯನ್ನು ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕು ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಯೋಜಿಸಿರುವ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿದೆ.

ಧಾರವಾಡ:

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವಿಧರರ ಮತಕ್ಷೇತ್ರಕ್ಕೆ 2026ರಲ್ಲಿ ಚುನಾವಣೆ ನಡೆಯಲಿದ್ದು, ಮತದಾರರ ಪಟ್ಟಿ ತಯಾರಿಕೆಗೆ ಸಿದ್ಧತೆ ಶುರುವಾಗಿದೆ. ಅರ್ಹ ಮತದಾರರು ಸೇರ್ಪಡೆಗೆ ಇದೀಗ ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯು ಕ್ರಮಬದ್ಧವಾಗಿ ಮತ್ತು ನ್ಯಾಯಬದ್ಧವಾಗಿ ತಯಾರಾಗುವಂತೆ ರಾಜಕೀಯ ಪಕ್ಷಗಳು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜರುಗಿಸಿದ ಅವರು, ಮತದಾರರ ಪಟ್ಟಿ ತಯಾರಿಕೆ ಕುರಿತು ಸೂಚನೆಗಳ ಪ್ರತಿಯನ್ನು ಎಲ್ಲ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಗಿದೆ. ಈ ಕುರಿತು ಅರ್ಹ ಪದವಿಧರ ಮತದಾರರಲ್ಲಿ ಜಾಗೃತಿ ಮೂಡಿಸಿ ನಿಯಮಾನುಸಾರ ಸದರಿ ಮತದಾರರ ಪಟ್ಟಿಗೆ ಸೇರ್ಪಡೆ ಆಗುವಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಡಿ. 30ಕ್ಕೆ ಅಂತಿಮ ಪಟ್ಟಿಸಿದ್ಧ:ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವ ನಮೂನೆಯನ್ನು ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕು ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಯೋಜಿಸಿರುವ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿದೆ. ಮತದಾರರ ಪಟ್ಟಿ ತಯಾರಿಕೆ ನಂತರ ನ. 25 ಈ ಮತಕ್ಷೇತ್ರದ ಮತದಾರರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ನ. 25ರಿಂದ ಡಿ. 10ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಆಕ್ಷೇಪಣೆಗಳನ್ನು ಡಿ. 25ರೊಳಗೆ ವಿಲೇವಾರಿ ಮಾಡಲಾಗುತ್ತದೆ. ಡಿ. 30ರಂದು ಮತದಾರರ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪಕ್ಷಗಳ ಪ್ರತಿನಿಧಿಗಳಾದ ಆರ್.ಎಂ. ಕಲ್ಯಾಣಶೆಟ್ಟಿ, ಪ್ರಕಾಶ ಹಳಿಯಾಳ, ಗುರುರಾಜ ಹುಣಸಿಮರದ, ದೇವರಾಜ ಕಂಬಳಿ, ನಿಂಗಪ್ಪ, ಅವಿನಾಶ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರಿದ್ದರು. ಅರ್ಹತೆ:ಭಾರತದ ಪ್ರಜೆಯಾಗಿರುವ, ಆಯಾ ಮತಕ್ಷೇತ್ರದೊಳಗಡೆ ವಾಸಿಸುತ್ತಿರುವ ಹಾಗೂ 1ನೇ ನವೆಂಬರ್‌ 2025ಕ್ಕೂ ಮುಂಚೆ ಕನಿಷ್ಠ ಮೂರು ವರ್ಷ ಮೊದಲು ವಿಶ್ವವಿದ್ಯಾಲಯದ ಪದವೀಧರನಾಗಿರಬೇಕು. ಅವರು ಪ್ರತಿಯೊಬ್ಬ ವ್ಯಕ್ತಿಯೂ ಮತದಾರರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ ಎಂ

ದು ಜಿಲ್ಲಾಧಿಕಾರಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಮಹತ್ವ ತಿಳಿದುಕೊಳ್ಳಲಿ: ಅಪರ ಜಿಲ್ಲಾಧಿಕಾರಿ
ಸ್ಮಶಾನದ ಅಭಿವೃದ್ಧಿ ಕಾಮಗಾರಿ ತ್ವರಿತಗೊಳಿಸಲು ಆಗ್ರಹ