ಅಣುವಿದ್ಯುತ್ ಸ್ಥಾವರ ವಿರೋಧಿಸಿ ಪ್ರತಿಭಟನೆಗೆ ಸಿದ್ಧತೆ

KannadaprabhaNewsNetwork |  
Published : Jan 01, 2025, 12:00 AM IST
31ುಲು1 | Kannada Prabha

ಸಾರಾಂಶ

ಹಿರೇಬೆಣಕಲ್ - ಚಿಕ್ಕಬೆಣಕಲ್ ಗ್ರಾಮದ ಸಮೀದ ಅಣು ವಿದ್ಯುತ್ ಸ್ಥಾವರ ನಿರ್ಮಿಸಲು ಸ್ಥಳ ಗುರುತಿಸಿದ ಜಿಲ್ಲಾಡಳಿತದ ಕ್ರಮದ ವಿರುದ್ಧ ಹೋರಾಟ ನಡೆಸಲು ಚಿಕ್ಕ ಬೆಣಕಲ್ ಗ್ರಾಮದಲ್ಲಿ ಪ್ರಮುಖರು ಮಂಗಳವಾರ ಪೂರ್ವಭಾವಿ ಸಭೆ ನಡೆಸಿದರು.

ಚಿಕ್ಕಬೆಣಕಲ್ ಗ್ರಾಮದಲ್ಲಿ ಪೂರ್ವಭಾವಿ ಸಭೆ । ರಸ್ತೆ ತಡೆಗೆ ತೀರ್ಮಾನಕನ್ನಡಪ್ರಭ ವಾರ್ತೆ ಗಂಗಾವತಿ

ಹಿರೇಬೆಣಕಲ್ - ಚಿಕ್ಕಬೆಣಕಲ್ ಗ್ರಾಮದ ಸಮೀದ ಅಣು ವಿದ್ಯುತ್ ಸ್ಥಾವರ ನಿರ್ಮಿಸಲು ಸ್ಥಳ ಗುರುತಿಸಿದ ಜಿಲ್ಲಾಡಳಿತದ ಕ್ರಮದ ವಿರುದ್ಧ ಹೋರಾಟ ನಡೆಸಲು ಚಿಕ್ಕ ಬೆಣಕಲ್ ಗ್ರಾಮದಲ್ಲಿ ಪ್ರಮುಖರು ಮಂಗಳವಾರ ಪೂರ್ವಭಾವಿ ಸಭೆ ನಡೆಸಿದರು.

ಗ್ರಾಮ ಪಂಚಾಯಿತಿಯಲ್ಲಿ ಚಿಕ್ಕಬೆಣಕಲ್, ಹಿರೇಬೆಣಕಲ್, ಹಳೇ ಕುಮ್ಮಟ ಸೇರಿದಂತೆ 10 ಗ್ರಾಮಗಳ ಪ್ರಮುಖರು ಹೋರಾಟದ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಮುಖಂಡ ಆನಂದಗೌಡ, ಈಗಾಗಲೇ ಕಳೆದ ಒಂದು ವಾರದಿಂದ ಚಿಕ್ಕಬೆಣಕಲ್- ಹಿರೇಬೆಣಕಲ್ ಸರ್ವೇ ನಂ. 35 ಅರಣ್ಯ ಪ್ರದೇಶದಲ್ಲಿ 1200 ಎಕರೆ ಭೂಮಿಯನ್ನು ಗುರುತಿಸಿ ನಕ್ಷೆ ತಯಾರಿಸಿದ್ದಾರೆ. ಆದರೆ ಗ್ರಾಮಗಳ ಜನರಿಗೆ ತಿಳಿಸದೆ ಗೌಪ್ಯವಾಗಿ ಭೂಮಿಯನ್ನು ಗುರುತಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿರುವುದು ಖಂಡನಾರ್ಹ ಎಂದು ಆಕ್ರೋಶ ವ್ಯಕ್ತ ಪಡಿಸಿದರು.ರಸ್ತೆ ತಡೆ ಪ್ರತಿಭಟನೆ:

ಅಣು ವಿದ್ಯುತ್ ಸ್ಥಾವರ ಸ್ಥಾಪನೆ ವಿರೋಧಿಸಿ ಸುಮಾರು 10 ಗ್ರಾಮಗಳ ನಾಗರಿಕರ ನೇತೃತ್ವದಲ್ಲಿ ಚಿಕ್ಕಬೆಣಕಲ್, ಹಿರೇಬೆಣಕಲ್ ಮುಖ್ಯ ಹೆದ್ದಾರಿ ಅಥವಾ ಹೇಮಗುಡ್ಡ ಟೋಲ್ ಗೇಟ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಂಜಪ್ಪ, ಭಗವಾನ್, ಹನುಮಂತಪ್ಪ ತಳವಾರ, ಚಿಕ್ಕಬೆಣಕಲ್ ಗ್ರಾಪಂ ಅಧ್ಯಕ್ಷ ಶಿವಮೂರ್ತಿ, ಲಿಂಗಪ್ಪ ಭೋವಿ, ಲಿಂಗಪ್ಪ ಮಠದ, ಶರಣೇಗೌಡ, ವೀರೇಶ ಅಂಗಡಿ, ಮಂಜುನಾಥ ಕಜ್ಜಿ, ಮಲ್ಲಪ್ಪ ತಳವಾರ ಸೇರಿದಂತೆ ವಿವಿಧ ಗ್ರಾಮಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ