ನ.1ರಂದು 69ನೇ ಅದ್ಧೂರಿ ರಾಜ್ಯೋತ್ಸವಕ್ಕೆ ಸಿದ್ಧತೆ

KannadaprabhaNewsNetwork |  
Published : Oct 20, 2024, 02:05 AM IST
ಕ್ಯಾಪ್ಷನಃ19ಕೆಡಿವಿಜಿ33ಃ ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆ ನಡೆಯಿತು. | Kannada Prabha

ಸಾರಾಂಶ

ಜಿಲ್ಲಾಡಳಿತದಿಂದ ನ.1ರಂದು ನಡೆಯುವ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ: ಜಿಲ್ಲಾಧಿಕಾರಿ ಮಾಹಿತಿ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ಜಿಲ್ಲಾಡಳಿತದಿಂದ ನವೆಂಬರ್ 1ರಂದು ನಡೆಯುವ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು. ಹೈಸ್ಕೂಲ್ ಮೈದಾನದಿಂದ ವಿವಿಧ ಆಕರ್ಷಕ ಕಲಾತಂಡಗಳೊಂದಿಗೆ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಮೆರವಣಿಗೆ ಹೊರಡು, ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಮೆರವಣಿಗೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಮತ್ತು ಕನ್ನಡಪರ ಸಂಘಟನೆಗಳ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಬೇಕು ಎಂದರು.

ರಾಜ್ಯೋತ್ಸವ ಅಂದರೆ ನವೆಂಬರ್ ತಿಂಗಳಿಗೆ ಮಾತ್ರ ಕನ್ನಡ ಬಳಕೆಗೆ ಸೀಮಿತವಾಗುವುದಲ್ಲ. ಆಡಳಿತದಲ್ಲಿ ಕನ್ನಡ, ನಿತ್ಯ ಬಳಕೆಯಲ್ಲಿ ಕನ್ನಡ, ಕಡತದಲ್ಲಿ ಕನ್ನಡ ಬಳಕೆ ಮಾಡುವ ಮೂಲಕ ವರ್ಷಪೂರ್ತಿ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. ಈಗಾಗಲೇ ಆಡಳಿತದಲ್ಲಿ ಕನ್ನಡ ಬಳಕೆಗೆ ಸೂಚನೆ ನೀಡಲಾಗಿದೆ. ಎಲ್ಲ ಇಲಾಖೆಯಲ್ಲಿಯೂ ಕನ್ನಡ ಬಳಕೆ ಕಡ್ಡಾಯ ಮಾಡಲಾಗಿದೆ. ಕೆಲವು ಖಾಸಗಿ ಹೆದ್ದಾರಿ ಫಲಕಗಳಲ್ಲಿ ಇಂಗ್ಲಿಷ್ ಪದ ಬಳಕೆ ಮಾಡಲಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳು ಇಂಗ್ಲಿಷ್‌ನಲ್ಲಿಯೇ ಮಾತನಾಡಬೇಕೆಂದು ಕಡ್ಡಾಯಗೊಳಿಸಿರುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೂಲಕ ಅಂತಹ ಶಾಲೆಗಳಿಗೆ ನೋಟಿಸ್ ನೀಡಲಾಗುತ್ತದೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮ:

ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಡು, ನುಡಿಯ ಕುರಿತಂತೆ ಗುಣಮಟ್ಟದ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗುವುದು. ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಗ್ಲಾಸ್ ಹೌಸ್‌ನಲ್ಲಿ ಏರ್ಪಡಿಸಲಾಗುತ್ತದೆ. ಈ ಕಾರ್ಯಕ್ರಮಗಳನ್ನು ತುಂಬಾ ಅಚ್ಚುಕಟ್ಟಾಗಿ ನಡೆಸಲು ಸೂಚನೆ ನೀಡಿದರು.

ಸಕಲ ಸಿದ್ಧತೆಗೆ ಸೂಚನೆ:

ರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಸಿದ್ಧತೆ ಕೈಗೊಳ್ಳಲು ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ. ಆಯಾ ಇಲಾಖೆ ಅಧಿಕಾರಿಗಳು ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಿ, ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಜರಿರಬೇಕೆಂದು ಸೂಚನೆ ನೀಡಿದರು.

ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ್, ಪಾಲಿಕೆ ಆಯುಕ್ತೆ ರೇಣುಕಾ, ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಡಾ.ರಾಮಚಂದ್ರಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

- - - -19ಕೆಡಿವಿಜಿ33ಃ:

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ