ಕನ್ನಡಪ್ರಭ ವಾರ್ತೆ ಚಿಂತಾಮಣಿ
ನಗರದ ಬೆಂಗಳೂರು ರಸ್ತೆಯಲ್ಲಿರುವ ಬ್ರಾಹ್ಮಣರ ಮತ್ತು ಆರ್ಯವೈಶ್ಯ ಸಮುದಾಯದಕ್ಕೆ ಸಂಬಂಧಿಸಿದ ಹರಿಶ್ಚಂದ್ರ ಘಾಟ್ ಸ್ಮಶಾನ, ಆರ್ಯವೈಶ್ಯ ಜನಾಂಗದ ರುದ್ರಭೂಮಿಗೆ ೫ ಕೋಟಿ ರೂ ವೆಚ್ಚದಲ್ಲಿ ಆಧುನಿಕ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ, ಪಟಾಲಮ್ಮ ಸರ್ಕಲ್‌ನಲ್ಲಿ ನಗರಸಭಾ ನಿಧಿಯಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕ ಹಾಗೂ ಹೈಮಾಸ್ ವಿದ್ಯುತ್ ದೀಪ ಉದ್ಘಾಟನೆ ಮತ್ತು ನಗರದ ವಿನೋಭಾ ಕಾಲೋನಿಯಲ್ಲಿ ಅಂಬೇಡ್ಕರ್ ಸಮುದಾಯ ಭವನ, ಅಂಗನವಾಡಿ ಕಟ್ಟಡ ಹಾಗೂ ಒಳಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ವಿದ್ಯುತ್ ಚಿತಾಗಾರ ಸ್ಥಾಪನೆನಗರದಲ್ಲಿ ವಿದ್ಯುತ್ ಚಿತಾಗಾರವನ್ನು ಸ್ಥಾಪನೆ ಮಾಡಬೇಕೆಂಬುದು ನನ್ನ ಕನಸಾಗಿತ್ತು. ಇದೀಗ ಆ ಕನಸು ಈಡೇರಿಕೆಗೆ ೫ ಕೋಟಿ ರೂ ವೆಚ್ಚದಲ್ಲಿ ವಿದ್ಯುತ್ ಚಿತಾಗಾರವನ್ನು ಸ್ಥಾಪನೆ ಮಾಡುತ್ತಿರುವುದಾಗಿ, ನಗರದಲ್ಲಿ ಈಗಾಗಲೇ ಕೋಟ್ಯತರ ರು.ಗಳ ವೆಚ್ಚದಲ್ಲಿ ಹಲವಾರು ರೀತಿಯ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿವೆ. ಎಂಜಿನಿಯರಿಂಗ್ ಕಾಲೇಜಿನ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಚಿಂತಾಮಣಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಚಿಂತನೆ ಮಾಡಲಾಗುತ್ತಿದ್ದು, ಮೆಡಿಕಲ್ ಕಾಲೇಜು ಸ್ಥಾಪನೆ ಅಗತ್ಯ ಭೂಮಿಯನ್ನು ಒದಗಿಸಿಕೊಡಲಾಗುವುದೆಂದರು.
ಕಾಂಗ್ರೆಸ್ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ನೀಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚು ಹೆಚ್ಚು ಅನುದಾನ ನೀಡುತ್ತಿದ್ದಾರೆ, ಮುಂದಿನ ಎರಡುವರೆ ವರ್ಷಗಳಲ್ಲಿ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆಂದು ತಿಳಿಸಿದರು.ಮುಂದಿನ ಪೀಳಿಗೆಗೂ ಉಪಯೋಗ
ನನ್ನ ಅಭಿವೃದ್ಧಿ ಕೆಲಸಗಳು ಈ ಕ್ಷಣಕ್ಕೆ ಮಾತ್ರ ಸೀಮಿತವಲ್ಲ ಮುಂದಿನ ಪೀಳಿಗೆಗೆ ಉಪಯೋಗವಾಗುವ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ, ನಮ್ಮ ತಾತನವರಾದ ಆಂಜನೇಯರೆಡ್ಡಿ ರವರ ಕಾಲದಿಂದಲೂ ಭವಿಷ್ಯತ್ತಿನ ಉದ್ದೇಶವಿಟ್ಟು ಯೋಜನೆ ಮಾಡುವಂತಹವರಾಗಿದ್ದು ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಾ ಬರುತ್ತಿದ್ದೇವೆ. ನಮ್ಮ ರಕ್ತದಲ್ಲಿಯೇ ಅಭಿವೃದ್ಧಿ ಗರಗತವಾಗಿದೆ. ಅದನ್ನು ಯಾರಿಂದಲೂ ಹೇಳಿಸಿಕೊಳ್ಳುವ ಅಗತ್ಯ ಎಲ್ಲ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷ, ಉಪಾಧ್ಯಕ್ಷೆ, ನಗರಸಭಾ ಮಾಜಿ ಸದಸ್ಯರು, ಕಾಂಗ್ರೇಸ್ ಮುಖಂಡರು, ಕಾರ್ಯಕರ್ತರು, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.