ಕುಷ್ಟಗಿಯಲ್ಲಿ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

KannadaprabhaNewsNetwork |  
Published : Nov 13, 2026, 02:30 AM IST
ಕುಷ್ಟಗಿ ತಾಲೂಕಿನಲ್ಲಿ ಮೊದಲ ಬಾರಿಗೆ ನ. 21ರಂದು ಪಟ್ಟಣದ ಶ್ರೀ ಬುತ್ತಿ ಬಸವೇಶ್ವರ ಸಭಾಭವನದಲ್ಲಿ ನಡೆಯಲಿರುವ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶಾಸಕ ದೊಡ್ಡನಗೌಡ ಪಾಟೀಲ ಅವರು ಪಟ್ಟಣದ ಬಿಜೆಪಿ ಅಂಜನಾದ್ರಿ ಕಾರ್ಯಾಲಯದಲ್ಲಿ ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ಕುಷ್ಟಗಿ ತಾಲೂಕಿನಲ್ಲಿ ಮೊದಲ ಬಾರಿಗೆ ನ. 21ರಂದು ಪಟ್ಟಣದ ಶ್ರೀ ಬುತ್ತಿ ಬಸವೇಶ್ವರ ಸಭಾಭವನದಲ್ಲಿ ನಡೆಯಲಿರುವ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶಾಸಕ ದೊಡ್ಡನಗೌಡ ಪಾಟೀಲ ಅವರು ಪಟ್ಟಣದ ಬಿಜೆಪಿ ಅಂಜನಾದ್ರಿ ಕಾರ್ಯಾಲಯದಲ್ಲಿ ಬಿಡುಗಡೆಗೊಳಿಸಿದರು.

ಕುಷ್ಟಗಿ: ಕುಷ್ಟಗಿ ತಾಲೂಕಿನಲ್ಲಿ ಮೊದಲ ಬಾರಿಗೆ ನ. 21ರಂದು ಪಟ್ಟಣದ ಶ್ರೀ ಬುತ್ತಿ ಬಸವೇಶ್ವರ ಸಭಾಭವನದಲ್ಲಿ ನಡೆಯಲಿರುವ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶಾಸಕ ದೊಡ್ಡನಗೌಡ ಪಾಟೀಲ ಅವರು ಪಟ್ಟಣದ ಬಿಜೆಪಿ ಅಂಜನಾದ್ರಿ ಕಾರ್ಯಾಲಯದಲ್ಲಿ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಕನ್ನಡ ಭಾಷೆಯ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ಸಮ್ಮೇಳನದ ಯಶಸ್ಸಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಸಮ್ಮೇಳನದ ಸರ್ವಾಧ್ಯಕ್ಷ ಚಂದಪ್ಪ ಹಕ್ಕಿ ಮಾತನಾಡಿ, ಸ್ಥಳೀಯ ಸಾಹಿತ್ಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಹಾಗೂ ಹೊಸ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಲಾಗಿದೆ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಿ ಸಮ್ಮೇಳನ ಯಶಸ್ವಿಗೊಳಿಸುವ ಮೂಲಕ ತಾಲೂಕಿನ ಸಾಹಿತ್ಯಿಕ ಗೌರವ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಹಡಪದ ಮಾತನಾಡಿ, ಸಮ್ಮೇಳನದ ಅಂಗವಾಗಿ ಮೆರವಣಿಗೆ, ಸಂಕೀರ್ಣ ಗೋಷ್ಠಿ ಹಾಗೂ ಚುಟುಕು ಕವಿಗೋಷ್ಠಿ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಶಿಕ್ಷಕ ನಟರಾಜ್ ಸೋನಾರ್ ಮಾತನಾಡಿದರು.

ವಿಶ್ವನಾಥ ಅಂಬ್ಲಿಕೊಪ್ಪಮಠ, ಬಸವರಾಜ ಗಾಣಿಗೇರ, ದೊಡ್ಡಪ್ಪ ಕೈಲವಾಡಗಿ, ಶಿವಾಜಿ ಹಡಪದ, ಜೀವನಸಾಬ ಬಿನ್ನಾಳ, ಪರಶಿವಮೂರ್ತಿ, ಬಸವರಾಜ ಉಪಲದಿನ್ನಿ, ರವೀಂದ್ರ ಬಾಕಳೆ, ಭೀಮಸೇನರಾವ್ ಕುಲಕರ್ಣಿ ಸೇರಿದಂತೆ ಸಂಘಟಕರು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌