ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ ಚುರುಕು

KannadaprabhaNewsNetwork |  
Published : Oct 18, 2026, 03:30 AM IST
ಚುರುಕು | Kannada Prabha

ಸಾರಾಂಶ

ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸದೆ, ಇಡೀ ಊರಿನ ಉತ್ಸವವಾಗಿ ಆಚರಿಸಿ ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಿ ಶ್ರಮಿಸಬೇಕು ಎಂದು ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕರೆ ನೀಡಿದರು.

ಕಾರ್ಕಳ ; ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸದೆ, ಇಡೀ ಊರಿನ ಉತ್ಸವವಾಗಿ ಆಚರಿಸಿ ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಿ ಶ್ರಮಿಸಬೇಕು ಎಂದು ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕರೆ ನೀಡಿದರು.

ಫೆಬ್ರವರಿ 18ರಿಂದ ಹತ್ತು ದಿನಗಳ ಕಾಲ ನಡೆಯಲಿರುವ ಮಹಾಮಸ್ತಕಾಭಿಷೇಕದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಹೋತ್ಸವಕ್ಕೆ ಇನ್ನು 123 ದಿನಗಳು ಮಾತ್ರ ಬಾಕಿಯಿದ್ದು, ಸಿದ್ಧತೆಗಳನ್ನು ಚುರುಕುಗೊಳಿಸಬೇಕಾಗಿದೆ. ಸರ್ಕಾರದಿಂದ ಅಗತ್ಯ ನೆರವು ದೊರೆಯುವ ನಿರೀಕ್ಷೆಯಿದ್ದು, ಈಗಾಗಲೇ ಅಟ್ಟಳಿಗೆ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿ ಕಾಮಗಾರಿ ಆರಂಭಗೊಂಡಿದೆ. ಮಹೋತ್ಸವದ ಹತ್ತು ದಿನಗಳ ಕಾಲ ಬೆಳಕಿನ ವ್ಯವಸ್ಥೆ, ಊಟೋಪಚಾರ ಹಾಗೂ ರಸ್ತೆ ಅಭಿವೃದ್ಧಿಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ತಮ್ಮ ಆರೋಗ್ಯದ ಕುರಿತು ಮಾತನಾಡಿದ ಅವರು, ಅನಾರೋಗ್ಯದಿಂದ 19 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದು, ದೇವರ ಆಶೀರ್ವಾದ ಹಾಗೂ ಜನರ ಹಾರೈಕೆಯಿಂದ ಗುಣಮುಖರಾಗಿ ಮರಳಿರುವುದು ಸಂತಸ ತಂದಿದೆ. ಮತ್ತೆ ಈ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗಿರುವುದು ಸಂತೃಪ್ತಿ ನೀಡಿದೆ ಎಂದರು.ಈ ಬಾರಿಯ ಮಹಾಮಸ್ತಕಾಭಿಷೇಕದಲ್ಲಿ ಯುಗಳ ಮುನಿ ಮಹಾರಾಜರು ಒಂದು ದಿನದ ಮಸ್ತಕಾಭಿಷೇಕದ ಜವಾಬ್ದಾರಿ ವಹಿಸಿಕೊಂಡಿರುವುದು ವಿಶೇಷವಾಗಿದೆ.ಕಾರ್ಕಳ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಡಾ. ರಾಜೇಂದ್ರ ಕುಮಾರ್ ಅವರು ಅನಾರೋಗ್ಯದಿಂದ ಚೇತರಿಸಿಕೊಂಡು ಮತ್ತೆ ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ ಎಂದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಮಹಾಮಸ್ತಕಾಭಿಷೇಕವು ಯಶಸ್ವಿಯಾಗಿ, ಮಾದರಿ ಉತ್ಸವವಾಗಿ ಮೂಡಿಬರಲಿ ಎಂದು ಆಶಿಸಿದರು.

ಇದಕ್ಕೂ ಮುನ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಸಮಸ್ತ ಜೈನ ಸಮಾಜದ ವತಿಯಿಂದ ಶ್ರೀ ಜೈನಮಠದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನೆರವೇರಿಸಲಾಯಿತು. ಶ್ರೀ ಕೂಷ್ಮಾಂಡಿನಿ ದೇವಿಗೆ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸ್ವಾಮೀಜಿ ಹಾಗೂ ಮುನಿ ಮಹಾರಾಜರ ಆಶೀರ್ವಾದದೊಂದಿಗೆ ಪ್ರಸಾದ ನೀಡಲಾಯಿತು.

ಸಭೆಯಲ್ಲಿ ಸಮಿತಿ ಉಪಾಧ್ಯಕ್ಷರಾದ ರತ್ನಾಕರ್ ರಾಜ್ ಅರಸ್ ಪಡುಬಿದ್ರಿ, ಅನಂತ್‌ರಾಜ್ ಪುವಣಿ ಹಾಗೂ ಕೋಶಾಧಿಕಾರಿ ಮೋಹನ್ ಪಡಿವಾಳ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಸ್ವಾಗತಿಸಿ, ಯೋಗರಾಜ್ ಶಾಸ್ತ್ರಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಸ್ತಿಗಾಗಿ ಸೊಸೆ, ಮೊಮ್ಮಕ್ಕಳೊಂದಿಗೆ ಪುತ್ರನನ್ನೇ ಕೊಂದ
ಜೆನ್‌ ಝೀಗಳ ದಾರಿತಪ್ಪಿಸುತ್ತಿರುವ ಸಿಜೆಪಿ: ಬಿ.ವೈ. ರಾಘವೇಂದ್ರ