ಕನ್ನಡಪ್ರಭ ವಾರ್ತೆ ಸಂಕೇಶ್ವರ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ವಾರದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರಾ ಪೂರ್ವ ತಯಾರಿ ಸೇರಿದಂತೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು. ಇದೇ ವೇಳೆ ಅಮೃತ್- 2 ಯೋಜನೆಯಡಿ ₹ 9.6 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಓವರ್‌ಹೆಡ್ ಟ್ಯಾಂಕ್ ಕಾಮಗಾರಿ ವೀಕ್ಷಿಸಿ ಮಾತನಾಡಿದ ಶಾಸಕರು, ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಆಗಸ್ಟ್ ತಿಂಗಳೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮೂರನೇ ಹಂತದ ಎಸ್‌ಐಆರ್ ಪ್ರಕ್ರಿಯೆ ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿದ್ದು, ಮತದಾರರ ಮಾಹಿತಿ ಪರಿಶೀಲನೆ ಹಾಗೂ ನವೀಕರಣ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು, ಬಿಎಲ್‌ಓಗಳು ಮತ್ತು ರಾಜಕೀಯ ಪಕ್ಷಗಳ ಬಿಎಲ್‌ಎಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಎಸ್‌ಐಆರ್ ಪ್ರಕ್ರಿಯೆ ಯಶಸ್ಸಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.ಅಂಕಲೆ ಗ್ರಾಮದ ಕುಡಿಯುವ ನೀರಿನ ಸಮಸ್ಯೆ, ಹೆದ್ದಾರಿ ಕಾಮಗಾರಿಯಿಂದ ಉಂಟಾಗಿರುವ ಮಾಲಿನ್ಯದಿಂದ ಹಿರಣ್ಯಕೇಶಿ ನದಿಪಾತ್ರ ಸ್ವಚ್ಛತೆ ಹಾಗೂ ಕೆಶಿಪ್ ರಸ್ತೆ ಕಾಮಗಾರಿ ಕುರಿತ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಬಂಧಿತ ಎಲ್ಲ ವಿಷಯಗಳು ಗಮನದಲ್ಲಿವೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬಾಕ್ಸ್ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಕ್ಷೇತ್ರದ 72 ಹಳ್ಳಿಗಳನ್ನು ಒಳಗೊಂಡ ₹ 265 ಕೋಟಿ ವೆಚ್ಚದ ನೂತನ ನೀರು ಸರಬರಾಜು ಯೋಜನೆ ತಾಲೂಕಿನಲ್ಲಿ ಜಾರಿಗೊಳ್ಳಲಿದೆ. ಇದರ ಮೂಲಕ ಗ್ರಾಮೀಣ ಭಾಗದ ಜನರ ಬಹುಕಾಲದ ನೀರಿನ ಬವಣೆಗೆ ಪರಿಹಾರ ದೊರೆಯಲಿದೆ.