ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಿದ್ಧತೆ: ಶಾಸಕ ಬೇಳೂರು

KannadaprabhaNewsNetwork |  
Published : Feb 15, 2026, 02:30 AM IST
ಶಾಸಕರು ಚಾಲನೆ ನೀಡಿದರು | Kannada Prabha

ಸಾರಾಂಶ

ಮುಂದಿನ ಹದಿನೈದು ದಿನಗಳಲ್ಲಿ ಪಟ್ಟಣದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸ್ಪಷ್ಟ ಚಿತ್ರಣ ಸಿಗಲಿದ್ದು, ಈ ದಿಸೆಯಲ್ಲಿ ಬೇಕಾದ ಪೂರ್ವಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಕನ್ನಡಪ್ರಭ ವಾರ್ತೆ ಸಾಗರ

ಮುಂದಿನ ಹದಿನೈದು ದಿನಗಳಲ್ಲಿ ಪಟ್ಟಣದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸ್ಪಷ್ಟ ಚಿತ್ರಣ ಸಿಗಲಿದ್ದು, ಈ ದಿಸೆಯಲ್ಲಿ ಬೇಕಾದ ಪೂರ್ವಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಮಾರ್ಕೆಟ್ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ಶನಿವಾರ ನಗರಸಭೆಯಿಂದ ಡಿವೈಡರ್ ನಡುವೆ ಅಲಂಕಾರಿಕಾ ಗಿಡ ಬೆಳೆಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಥಳೀಯರು ಸಹ ಅಗಲೀಕರಣಕ್ಕೆ ಸಹಮತಿ ಸೂಚಿಸಿದ್ದಾರೆ ಎಂದರು.

ಮಾರ್ಕೆಟ್ ರಸ್ತೆ ಸಂಪೂರ್ಣ ಅಗಲೀಕರಣವಾದ ನಂತರ ಶಿವಪ್ಪನಾಯಕ ವೃತ್ತದಿಂದ ದುರ್ಗಾಂಬಾ ವೃತ್ತದವರೆಗೆ ಡಿವೈಡರ್‌ಗಳ ನಡುವೆ ಸುಂದರ ಗಿಡಗಳನ್ನು ಬೆಳೆಸಲಾಗುತ್ತದೆ. ಆಂದ್ರಪ್ರದೇಶದ ರಾಜಮಂಡ್ರಿಯಿಂದ ಸುಮಾರು ೮ ಲಕ್ಷ ರು. ವೆಚ್ಚದಲ್ಲಿ ಅಲಂಕಾರಿಕಾ ಗಿಡಗಳನ್ನು ಖರೀದಿಸಿ ತರಲಾಗಿದ್ದು, ಅದನ್ನು ಬಿ.ಎಚ್.ರಸ್ತೆಯ ರಾಷ್ಟ್ರೀಯ ಹೆದ್ದಾರಿ ಡಿವೈಡರ್, ಮಾರ್ಕೆಟ್ ರಸ್ತೆ ಡಿವೈಡರ್‌ಗಳ ನಡುವೆ ಹಾಕಲಾಗುತ್ತದೆ. ಜಾನುವಾರುಗಳು ಇದನ್ನು ತಿನ್ನದೆ ಇರುವುದರಿಂದ ಇದನ್ನು ನಗರಸಭೆಯಿಂದ ನಿರ್ವಹಣೆ ಮಾಡಲು ತಿಳಿಸಲಾಗಿದೆ ಎಂದು ಹೇಳಿದರು.

ಪೌರಾಯುಕ್ತ ಎಚ್.ಕೆ.ನಾಗಪ್ಪ, ಕಾಂಗ್ರೆಸ್ ಪ್ರಮುಖರಾದ ಮಧುಮಾಲತಿ, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಎಲ್.ಚಂದ್ರಪ್ಪ, ಡಿ.ದಿನೇಶ್, ಸೈಯದ್ ಜಾಕೀರ್, ಸುರೇಶ ಬಾಬು ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲಾ ಮಕ್ಕಳಿಂದ ರಸ್ತೆ ಕಾಮಗಾರಿ ಕೆಲಸ...!
ಮಾದಿಗ ಮಹಾಸಭಾದ ತಾಲೂಕಾಧ್ಯಕ್ಷರಾಗಿ ಕತಿಕ್ಯಾತನಹಳ್ಳಿ ನರಸಿಂಹಪ್ಪ ಆಯ್ಕೆ