ಕೊಡವ ಜಮ್ಮ ಮುಸ್ಲಿಂ ಕುಟುಂಬಗಳ ಕ್ರೀಡಾ ಸಂಭ್ರಮಕ್ಕೆ ಸಿದ್ಧತೆ

KannadaprabhaNewsNetwork |  
Published : Nov 10, 2026, 01:30 AM IST
ಚಿತ್ರ : 8ಎಂಡಿಕೆ7 : ಕೊಡವ ಜಮ್ಮ ಮುಸ್ಲಿಂ ಕುಟುಂಬಗಳ ಕ್ರೀಡಾ ಸಂಭ್ರಮಕ್ಕೆ ಸಿದ್ಧತೆ | Kannada Prabha

ಸಾರಾಂಶ

ಕೊಡವ ಜಮ್ಮ ಮುಸ್ಲಿಂ ಕುಟುಂಬಗಳನ್ನು ಕ್ರೀಡೆಯ ಮೂಲಕ ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಕೊಡವ ಜಮ್ಮ ಮುಸ್ಲಿಂ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗುತ್ತಿರುವ ಎರಡನೇ ಆವೃತ್ತಿಯ ವಾಲಿಬಾಲ್ ಹಾಗೂ ನಾಲ್ಕನೇ ಆವೃತ್ತಿಯ ಕ್ರಿಕೆಟ್ ಪಂದ್ಯಾಟಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ವಿರಾಜಪೇಟೆ: ಕೊಡವ ಜಮ್ಮ ಮುಸ್ಲಿಂ ಕುಟುಂಬಗಳನ್ನು ಕ್ರೀಡೆಯ ಮೂಲಕ ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಕೊಡವ ಜಮ್ಮ ಮುಸ್ಲಿಂ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗುತ್ತಿರುವ ಎರಡನೇ ಆವೃತ್ತಿಯ ವಾಲಿಬಾಲ್ ಹಾಗೂ ನಾಲ್ಕನೇ ಆವೃತ್ತಿಯ ಕ್ರಿಕೆಟ್ ಪಂದ್ಯಾಟಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ಈ ಹಿನ್ನೆಲೆಯಲ್ಲಿ ಎರಡೂ ಕ್ರೀಡಾಕೂಟಗಳ ಆಯೋಜನೆಯ ಜವಾಬ್ದಾರಿ ವಹಿಸಿಕೊಂಡಿರುವ ಕುಟುಂಬಗಳಿಗೆ ಪಂದ್ಯಾಟದ ಧ್ವಜ ಹಸ್ತಾಂತರಿಸುವ ಕಾರ್ಯಕ್ರಮ ವಿರಾಜಪೇಟೆಯಲ್ಲಿರುವ ಸಂಘದ ಕಚೇರಿಯಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕುವಲೆರ ಅನಿಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಎರಡನೇ ಆವೃತ್ತಿಯ ವಾಲಿಬಾಲ್ ಪಂದ್ಯಾಟದ ಆಯೋಜನೆಯ ಜವಾಬ್ದಾರಿಯನ್ನು ಚಿಟ್ಟಡೆ ಎರ್ಟಂಡ ಕುಟುಂಬಸ್ಥರು ಹಾಗೂ ನಾಲ್ಕನೇ ಆವೃತ್ತಿಯ ಕ್ರಿಕೆಟ್ ಪಂದ್ಯಾಟದ ಆಯೋಜನೆಯ ಜವಾಬ್ದಾರಿಯನ್ನು ಕುಂಜಿಲ ವಯಕೋಲಂಡ ಕುಟುಂಬಸ್ಥರು ವಹಿಸಿಕೊಂಡರು. ಈ ಹಿನ್ನೆಲೆಯಲ್ಲಿ ಎರಡೂ ಕುಟುಂಬಗಳ ಹಿರಿಯರಿಗೆ ಅಧಿಕೃತವಾಗಿ ಪಂದ್ಯಾಟದ ಧ್ವಜವನ್ನು ಹಸ್ತಾಂತರಿಸಲಾಯಿತು.

ಜ ಹಸ್ತಾಂತರಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕುವಲೆರ ಅನಿಸ್ ಅವರು, ಈ ಬಾರಿ ವಾಲಿಬಾಲ್ ಪಂದ್ಯಾಟದ ಎರಡನೇ ಆವೃತ್ತಿಯನ್ನು ಎರ್ಟಂಡ ಕುಟುಂಬಸ್ಥರು ಹಾಗೂ ಕ್ರಿಕೆಟ್ ಪಂದ್ಯಾಟದ ನಾಲ್ಕನೇ ಆವೃತ್ತಿಯನ್ನು ವಯಕೋಲಂಡ ಕುಟುಂಬಸ್ಥರು ಆಯೋಜಿಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದರು.ಸಂಘದ ಸದಸ್ಯ ಮಂದಮಡ ಮುನೀರ್ ಅಝೀಜ್ ಸ್ವಾಗತಿಸಿ, ನಿರೂಪಿಸಿದರು. ಕಾರ್ಯದರ್ಶಿ ಪುಡಿಯಂಡ ಮುನೀರ್, ಕುವಲೆರ ಕಲಿಲ್, ಮಿಥಲ ತಂಡ ಲತೀಫ್, ಕುವಲೆರ ಶಂಶುದ್ದೀನ್, ಕುವಲೆರ ರಶೀದ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12, 13ರಂದು ಪುಣ್ಯಾರಾಧನೆ, ಸ್ಮರಣೋತ್ಸವ, ಜನಜಾಗೃತಿ ಧರ್ಮ ಸಮ್ಮೇಳನ
ಟನಲ್ ಮಾಡಿದ್ರೂ ಆಗಲ್ಲ, ಎಲಿವೇಟೆಡ್‌ ಮಾಡಿದರೂ ಅಪಾದನೆ: ಡಿಕೆಶಿ ಆಕ್ರೋಶ