ಕನ್ನಡಪ್ರಭ ವಾರ್ತೆ ಯಳಂದೂರು
ಅಂದು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಯಂತಿಯನ್ನು ಆಚರಿಸಲಾಗುವುದು. ಎಲ್ಲಾ ಇಲಾಖೆಗಳ ನೌಕರರು, ಅಧಿಕಾರಿ ವರ್ಗ, ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಬೇಕು ಎಂದು ತಹಸೀಲ್ದಾರ್ ಬಸವರಾಜು ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯವರು ಇತರೆ ಇಲಾಖೆಯವರ ಸಹಯೋಗದೊಂದಿಗೆ ಇದರ ಜವಾಬ್ದಾರಿಯನ್ನು ವಹಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ಜಯಂತಿಗಳನ್ನು ಕೇವಲ ಒಂದೇ ವರ್ಗದ ಜನರಿಗೆ ಸೀಮಿತಗೊಳಿಸದೆ, ಎಲ್ಲಾ ವರ್ಗದ ಜನರೂ ಇದರಲ್ಲಿ ಭಾಗವಹಿಸಬೇಕು ಎಲ್ಲರೂ ಕೂಡ ಇಂತಹ ಮಹಾನ್ ವ್ಯಕ್ತಿಗಳ ಜಯಂತಿಯಲ್ಲಿ ಹಾಜರಿರಬೇಕು ಎಂದು ತಹಸೀಲ್ದಾರ್ ಕರೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ಪಪಂ ಮುಖ್ಯಾಧಿಕಾರಿ ಎಂ.ಪಿ. ಮಹೇಶ್, ಬಿಳಿಗಿರಿರಂಗನಬೆಟ್ಟದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ. ಶ್ರೀನಿವಾಸ್, ಪಪಂ ನಾಮನಿರ್ದೇಶಿತ ಸದಸ್ಯ ಲಿಂಗರಾಜಮೂರ್ತಿ, ಸಿ. ರಾಜಣ್ಣ, ಯರಿಯೂರು ನಾಗೇಂದ್ರ, ವೈ.ಕೆ.ಮೋಳೆ ನಾಗರಾಜು, ಕಂದಹಳ್ಳಿ ನಾರಾಯಣ ಸಮಾಜ ಕಲ್ಯಾಣ ಇಲಾಖೆಯ ನಾಗರಾಜು, ಮಮತ, ಸುರೇಶ್, ರಾಜೇಂದ್ರ ಪ್ರಭು, ವಿಜಯ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.