ಕನ್ನಡ ರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ

KannadaprabhaNewsNetwork |  
Published : Oct 12, 2026, 02:30 AM IST
ಚಿತ್ರ : 11ಎಂಡಿಕೆ1 : ಜಿಲ್ಲಾಧಿಕಾರಿ ಸಭೆ.  | Kannada Prabha

ಸಾರಾಂಶ

ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ಮಡಿಕೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ ತೀರ್ಮಾನಿಸಿದೆ. ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಮಡಿಕೇರಿ : ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ಮಡಿಕೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ ತೀರ್ಮಾನಿಸಿದೆ. ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ನಗರದ ಸ್ಕ್ವಾರ್ಡನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ವೃತ್ತದಿಂದ ಕಾಲೇಜು ರಸ್ತೆ ಮಾರ್ಗವಾಗಿ ಪೊಲೀಸ್ ಕವಾಯತು ಮೈದಾನದವರೆಗೆ ವೈಭವದ ಮೆರವಣಿಗೆ ನಡೆಯಲಿದೆ. ಇದರಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್, ಎನ್‌ಸಿಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ಭಾರತ್ ಸೇವಾದಳ ಹಾಗೂ ಗೃಹರಕ್ಷಕ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ.ಕೃಷಿ, ತೋಟಗಾರಿಕೆ, ಅರಣ್ಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳು ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಿವೆ. ಶ್ರಮಿಸಿದ ಇಲಾಖೆಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು.

ಮಳೆಯ ಸಾಧ್ಯತೆ ಇರುವುದರಿಂದ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಎಂಜಿನಿಯರ್‌ಗಳು ಜಲನಿರೋಧಕ (ವಾಟರ್‌ಪ್ರೂಫ್) ವೇದಿಕೆ ನಿರ್ಮಿಸಲು ಸೂಚಿಸಲಾಗಿದೆ. ಗಣ್ಯರು, ಮಾಜಿ ಸೈನಿಕರು ಹಾಗೂ ಪತ್ರಕರ್ತರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ.

ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಬಿಂಬಿಸುವ ಗುಣಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಹಾಗೂ ವಿದ್ಯಾರ್ಥಿಗಳಿಗೆ ಉಪಾಹಾರ ನೀಡಲು ನಿರ್ಧರಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಸಾಧಕರನ್ನು ಗೌರವಿಸಲು ಸಲಹೆ ನೀಡಿದರು.ಸಭೆಯಲ್ಲಿ ಡಿವೈಎಸ್‌ಪಿ ಸೂರಜ್, ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯೋತ್ಸವದಂದು ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕೆಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ
ಗ್ರಾಮಾಭಿವೃದ್ಧಿ ಯೋಜನೆಯಿಂದ ವ್ಯಸನಮುಕ್ತಿಗೆ ಪ್ರೇರಣೆ: ಆನಂದ ಸುವರ್ಣ