ದೊಡ್ಡಬಳ್ಳಾಪುರ: ನುಲಿಯ ಚಂದಯ್ಯ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆ. 11ರಂದು ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿಯ ಕೊರಮರ ಬೀದಿಯ ಭಜನಾ ಮಂದಿರ ಮುಂಭಾಗ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಹೇಳಿದರು.
ನುಲಿಯ ಚಂದಯ್ಯನವರು ವಚನಕಾರರಾಗಿ ಕನ್ನಡ ಸಾಹಿತ್ಯಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಶಿಷ್ಠಾಚಾರಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸಬೇಕು. ಉಪಹಾರ ಮತ್ತು ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕಲಾ ಪ್ರದರ್ಶನ ನೀಡುವ ತಂಡಗಳನ್ನು ನಿಯೋಜಿಸುವಂತೆ ಹಾಗೂ ನುಲಿಯ ಚಂದಯ್ಯ ಅವರ ವಿಚಾರಧಾರೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಹಾಗೂ ವಚನ ಗಾಯನ ಸೇರಿದಂತೆ ಅಗತ್ಯ ವ್ಯವಸ್ಥೆ ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ, ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಪರಿವೀಕ್ಷಕರಾದ ಪದ್ಮಾವತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಫೋಟೋ-4ಕೆಡಿಬಿಪಿ3- ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ನುಲಿಯ ಚಂದಯ್ಯ ಜಯಂತಿ ಆಚರಣೆ ಪೂರ್ವಭಾವಿ ಸಭೆ ನಡೆಯಿತು.