ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಲು ಮುಖ್ಯವಾಗಿ ಕೃಷಿ, ಆರೋಗ್ಯ, ಶಿಕ್ಷಣ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆಯವರಿಗೆ ಮೂಲದಲ್ಲಿ ಇರುವ ಸಮಸ್ಯೆಗಳು ಹಾಗೂ ಅದನ್ನು ಪರಿಹರಿಸಲು ಕ್ರಮಗಳ ಕುರಿತು ವರದಿ ನೀಡುವಂತೆ ತಿಳಿಸಲಾಗಿದೆ. ಮಂಡ್ಯ ನಗರಸಭೆಗೆ ಹೊಂದಿಕೊಂಡಿರುವ ಗ್ರಾಮ ಪಂಚಾಯ್ತಿಗಳನ್ನು ನಗರಸಭೆಯ ವ್ಯಾಪ್ತಿಗೆ ತಂದು ಅಭಿವೃದ್ಧಿಪಡಿಸಬೇಕಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸುವುದಾಗಿ ತಿಳಿಸಿದರು.
ನಗರ ವ್ಯಾಪ್ತಿಯಲ್ಲಿ 24x7 ಪ್ರತಿ ದಿನ ಕುಡಿಯುವ ನೀರು ಒದಗಿಸುವ ಬಗ್ಗೆ ಯೋಜನೆ ರೂಪಿಸಿ. ಇದಲ್ಲದೇ, ಮಂಡ್ಯ ನಗರದ ಹೊರವಲಯದಲ್ಲಿ ರಿಂಗ್ ರೋಡ್ ರೂಪಿಸುವ ಬಗ್ಗೆ ಚಿಂತಿಸಬೇಕು ಎಂದು ಸಲಹೆ ನೀಡಿದರು.ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಮಾತನಾಡಿ, ಖಾಸಗಿ ಲೇಔಟ್‌ಗಳಿಗೆ ಅನುಮತಿ ನೀಡುವ ಮೊದಲು ನಗರ ಯೋಜನಾಧಿಕಾರಿಗಳು ರಸ್ತೆ, ಚರಂಡಿ ಇನ್ನಿತರ ಮೂಲಭೂತ ವ್ಯವಸ್ಥೆಗಳಿಗೆ ಸ್ಥಳಾವಕಾಶ ಮಾಡಿಕೊಂಡಿರುವುದನ್ನು ಪರಿಶೀಲಿಸಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಮಾತನಾಡಿ, ಮಾನವ ಅಭಿವೃದ್ಧಿ ವರದಿಯನ್ನು ಅಧ್ಯಯನ ಮಾಡಿ ಸಿದ್ಧಪಡಿಸಲು ಮೈಸೂರು ವಿಶ್ವವಿದ್ಯಾನಿಲಯದೊಂದಿಗೆ ಎಂಒಯು ಮಾಡಿಕೊಳ್ಳಬೇಕಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.