ಕನ್ನಡಪ್ರಭ ವಾರ್ತೆ ಹೊಸಕೋಟೆ ಆಗಸ್ಟ್ 15ರಂದು ನಗರದ ಚೆನ್ನಬೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದ ಸ್ವಾತಂತ್ರ‍್ಯ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ತಾಲೂಕು ಆಡಳಿತ ವತಿಯಿಂದ ಮಾಡಿಕೊಳ್ಳಿ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.ನಗರದ ತಾಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಪ್ರತಿವರ್ಷದಂತೆ ಈ ವರ್ಷವೂ ಸಹ ಅರ್ಥಪೂರ್ಣವಾಗಿ ಸ್ವಾತಂತ್ರ‍್ಯೋತ್ಸವ ಆಚರಣೆ ಮಾಡಬೇಕಿದೆ. ಹೊಸಕೋಟೆಯಲ್ಲಿ ಪ್ರತಿವರ್ಷ ವಿಭಿನ್ನವಾಗಿ ಆಚರಣೆ ಮಾಡುತ್ತಿದ್ದು ಈ ಬಾರಿಯೂ ಸಹ ಎಲ್ಲಾ ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಂಡು ಆಚರಣೆ ಮಾಡಿ. ಬೆಳಗ್ಗೆ 8:30ಕ್ಕೆ ಎಲ್ಲಾ ಅಧಿಕಾರಿಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಜರಿರಬೇಕು. 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ 12 ಗಂಟೆಗೆ ಕಾರ್ಯಕ್ರಮವನ್ನು ಮುಕ್ತಾಯ ಮಾಡಬೇಕು. ಉಳಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಪಥ ಸಂಚಲನ ಸೇರಿದಂತೆ ಸ್ವಾತಂತ್ರ‍್ಯೋತ್ಸವದ ಕಾರ್ಯಕ್ರಮಗಳನ್ನ ಅಚ್ಚುಕಟ್ಟಾಗಿ ನಿಭಾಯಿಸಿ ಎಂದರು.ಸಾಧಕರನ್ನು ಗುರುತಿಸಿ:
ಆ. 16ಕ್ಕೆ ಶ್ರೀ ಕೃಷ್ಣ ಜನ್ಮಾಷ್ಠಮಿ
ಆ. 16ರಂದು ತಾಲೂಕು ಆಡಳಿತ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಮಾಡುವ ಸಲುವಾಗಿ ತಾಲೂಕು ಆಡಳಿತ ಹಾಗೂ ಯಾದವ ಸಂಘದ ವತಿಯಿಂದ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.ಪ್ರತಿ ವರ್ಷದಂತೆ ತಾಲೂಕು ಕಚೇರಿ ಆವಣದಲ್ಲಿ ಸರಳವಾಗಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಯಾದವ ಸಮುದಾಯದ ಮುಖಂಡರ ಮನವಿಯಂತೆ ಶಾಸಕ ಶರತ್ ಬಚ್ಚೇಗೌಡ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಅಲ್ಲದೆ ಪ್ರತಿ ಗ್ರಾಪಂ ಆವರಣದಲ್ಲಿ ಶ್ರೀ ಕೃಷ್ಣಾಜನ್ಮಾಷ್ಠಮಿ ಆಚರಣೆ ಮಾಡುವಂತೆ ಗ್ರಾಪಂಗಳಿಗೆ ಆದೇಶ ಮಾಡಿ ಎಂದು ತಾಪಂ ಅಧಿಕಾರಿಗಳಿಗೆ ಸೂಚಿಸಿದರು.ಫೋಟೋ: 7 ಹೆಚ್‌ಎಸ್‌ಕೆ 2 ಹೊಸಕೋಟೆ ನಗರದ ತಾಲೂಕು ಕಚೇರಿ, ಅವಣದಲ್ಲಿ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ಸ್ವತಂತ್ರ ದಿನಾಚರಣೆ ಹಾಗೂ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.