- ಪೆರೇಡ್, ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ಧಗೊಳಿಸಬೇಕು
- ಉಪವಿಭಾಗಾಧಿಕಾರಿಗಳು ಗಣರಾಜ್ಯೋತ್ಸವದ ಪೂರ್ವಸಿದ್ಧತೆ ಪರಿಶೀಲಿಸಬೇಕು - - - ಕನ್ನಡಪ್ರಭ ವಾರ್ತೆ ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ಜ.26ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ, ವಿತರಿಸಲು ಕ್ರಮ ವಹಿಸಲು ಅಪರ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಜಿ.ಪಂ. ಉಪಕಾರ್ಯದರ್ಶಿ ಹಾಗೂ ತಹಸೀಲ್ದಾರರಿಗೆ ತಿಳಿಸಿದರು.ಪೆರೇಡ್ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ಧಗೊಳಿಸುವುದು, ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ವೇದಿಕೆ ಸಿದ್ಧತೆ, ಸೌಂಡ್ ಸಿಸ್ಟಂ, ವೇದಿಕೆ ಅಲಂಕಾರ ಮಾಡುವಂತೆ ಪಾಲಿಕೆ, ಸಶಸ್ತ್ರ ಮೀಸಲು ಪಡೆ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕ್ರೀಡಾ ಯುವಜನ ಸಬಲೀಕರಣ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆಯಾದ ಪೆರೇಡ್ ಪ್ರದರ್ಶನವನ್ನು ಪೊಲೀಸ್ ಇಲಾಖೆ, ಕೆಎಸ್‍ಆರ್‌ಪಿಪಿ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಎನ್‍ಸಿಸಿ, ಅಗ್ನಿಶಾಮಕ ದಳ, ಹೋಂ ಗಾರ್ಡ್ಸ್ ಹಾಗೂ ವಿದ್ಯಾರ್ಥಿಗಳಿಂದ ಏರ್ಪಡಿಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು.
ಗಣರಾಜ್ಯೊತ್ಸವ ಆಚರಣೆ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲು ಎಲ್ಲ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಉಪ ಸಮಿತಿ ರಚಿಸಿಲು ತೀರ್ಮಾನಿಸಿದ ಅವರು ಉಪವಿಭಾಗಾಧಿಕಾರಿಗಳು ಗಣರಾಜ್ಯೋತ್ಸವದ ಪೂರ್ವಸಿದ್ಧತೆ ಪರಿಶೀಲಿಸಬೇಕು. ಅಂದು ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು ಎಂದು ತಿಳಿಸಿದರು.
- - - ಪೋಟೊ: 5ಎಸ್‌ಎಂಜಿಕೆಪಿ02ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಡಾ.ಆರ್.ಸೆಲ್ವಮಣಿ ಮಾತನಾಡಿದರು.