ಹೇಮರೆಡ್ಡಿ ಮಲ್ಲಮ್ಮ ಜಯಂತಿಗೆ ಸಿದ್ಧತೆ ಮಾಡಿಕೊಳ್ಳಿ

KannadaprabhaNewsNetwork |  
Published : Apr 25, 2026, 02:45 AM IST
24ಕೆಪಿಎಲ್22 ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕುರಿತು ಕೊಪ್ಪಳ ಜಿಲ್ಲಾಡಳಿತ ಭವನದ ಕೆಸ್ವಾನ್-2ರ ಸಭಾಂಗಣದಲ್ಲಿ ಶುಕ್ರವಾರ ಕರೆದ ಪೂರ್ವಭಾವಿ ಸಭೆ | Kannada Prabha

ಸಾರಾಂಶ

ಜಿಲ್ಲಾ ಕೇಂದ್ರದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಗಾಗಿ ಸಂಬಂಧಿಸಿದ ಇಲಾಖೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು

ಕೊಪ್ಪಳ: ಹೇಮರೆಡ್ಡಿ ಮಲ್ಲಮ್ಮ ಜಯಂತಿ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶ್ರೀಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕುರಿತು ಕೊಪ್ಪಳ ಜಿಲ್ಲಾಡಳಿತ ಭವನದ ಕೆಸ್ವಾನ್-2ರ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹೇಮರೆಡ್ಡಿ ಮಲ್ಲಮ್ಮ ಜಯಂತಿ ಮೇ.10ರಂದು ಆಚರಣೆ ಮಾಡಲಾಗುವುದು. ಜಯಂತಿ ದಿನದಂದು ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ತಾಲೂಕು ಕೇಂದ್ರಗಳಲ್ಲಿ ಮತ್ತು ತಾಲೂಕು ಕಚೇರಿ, ಗ್ರಾಪಂ, ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಡ್ಡಾಯವಾಗಿ ಆಚರಣೆ ಮಾಡಬೇಕಾಗಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಕೇಂದ್ರದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಗಾಗಿ ಸಂಬಂಧಿಸಿದ ಇಲಾಖೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಮೇ 10ರ ಬೆಳಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿರುವ ಶ್ರೀಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪೂಜೆ, ಶ್ರೀಹೇಮರೆಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮ ನಡೆಯಲಿದೆ. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಎಲ್ಲ ಸಮಾಜದವರು ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣ ಕುಮಾರ್, ಸಮಾಜದ ಮುಖಂಡ ವಿರುಪಣ್ಣ ನವೋದಯ, ಹನಮರೆಡ್ಡಿ ಹಂಗನಕಟ್ಟಿ, ಕಾಶೀನಾಥರೆಡ್ಡಿ, ಹನಮರೆಡ್ಡಿ, ಹೇಮರೆಡ್ಡಿ, ಸಂಜೀವರೆಡ್ಡಿ ಛಪ್ಪರದ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭೂಮಿ ಸಂರಕ್ಷಣೆ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕು
ಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್: ಟಿ.ಬಿ. ಹರಿಕಾಂತ