ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ

KannadaprabhaNewsNetwork |  
Published : Oct 15, 2025, 02:07 AM IST
14ಕೆಪಿಎಲ್21 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆ | Kannada Prabha

ಸಾರಾಂಶ

ಮೆರವಣಿಗೆ ಸಾಗುವ ಮಾರ್ಗದಲ್ಲಿ ಶುಚಿತ್ವ ಕಾರ್ಯವಾಗಬೇಕು

ಕೊಪ್ಪಳ: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ವರ್ಷ ಆಚರಿಸಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದ ಮುಖಂಡರ ಕೋರಿಕೆಯ ಮೇರೆಗೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅ.23ರ ಬದಲಿಗೆ ನ. 3 ರಂದು ಜಿಲ್ಲಾ ಕೇಂದ್ರದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಎಲ್ಲ ಗಣ್ಯರಿಗೆ ಆಹ್ವಾನ ನೀಡಬೇಕು. ಕೆಲಸ ಹಂಚಿಕೆ ಮಾಡಿದಂತೆ ಆಯಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮೆರವಣಿಗೆ ಸಾಗುವ ಮಾರ್ಗದಲ್ಲಿ ಶುಚಿತ್ವ ಕಾರ್ಯವಾಗಬೇಕು.ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಅ.23 ರಂದು ಕಡ್ಡಾಯವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಮಾತನಾಡಿ, ನ.3 ರಂದು ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರದ ಮೆರವಣಿಗೆಯು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಪ್ರಾರಂಭವಾಗಿ ಅಂಬೇಡ್ಕರ್ ಸರ್ಕಲ್, ಶಾರದಾ ಟಾಕೀಸ್, ಗಡಿಯಾರ ಕಂಬ್‌ ಮಾರ್ಗವಾಗಿ ಸಾಹಿತ್ಯಭವನದವರೆಗೆ ನಡೆಯಲಿದೆ. ನಂತರ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಪ್ರೌಢಶಾಲಾ ಮಕ್ಕಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಪ್ರಬಂಧ ಏರ್ಪಡಿಸಿ, ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿ ಹಿರೇಮಠ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪುಷ್ಪ ಲತಾ, ಆರೋಗ್ಯ ಇಲಾಖೆಯ ಶಿವಾನಂದ ಪೂಜಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಕಿತ್ತೂರು ರಾಣಿ ಚೆನ್ನಮ್ಮ ಸಮಾಜದ ರಾಜ್ಯ ಅಧ್ಯಕ್ಷ ಸೋಮನಗೌಡ ಪಾಟೀಲ, ತಾಲೂಕು ಅಧ್ಯಕ್ಷ ಕರಿಯಪ್ಪ ಮೇಟಿ ಹಾಗೂ ದೇವರಾಜ ಹಾಲಸಮುದ್ರ, ಮಲ್ಲಿಕಾರ್ಜುನ ಸಿಳಿನ್, ಶರಣಪ್ಪ ಶೀಲವಂತರ, ಮಾರ್ಕಂಡಪ್ಪ ಅಜಗಾರ, ಉಮೇಶ್ ಎತ್ತಿನಮನಿ, ರೇಖಾ ಸಂಗಲ್, ನಿರ್ಮಲಾ ಲಿಂಗಣ್ಣನವರ, ಶಿವಲೀಲಾ ಎಲ್. ಪಾಟೀಲ, ಸುಮಂಗಲಾ ಹಂಚಿನಾಳ, ಗೀತಾ ಪಾಟೀಲ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.

PREV

Recommended Stories

ಮರಳು ದಂಧೆ ತಡೆದ ಎಎಸ್‌ಐಗೆ ಹಲ್ಲೆ: ರಾಜೂಗೌಡ
ನಟ ದರ್ಶನ್‌ ಸೆಲ್‌ ಪರಿಶೀಲನೆ ನಡೆಸಿದ ಕಾನೂನು ಪ್ರಾಧಿಕಾರ